ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಗಳಿಗೆ ಕಿಡಿಕಿಡಿಯಾಗೇ ತಿರುಗೇಟು ನೀಡಿದ್ದರು. ಈ ಬಳಿಕ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಈ ಕೆಳಗಿನಂತೆ ಪ್ರತ್ಯುತ್ತರ ನೀಡಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಎಂ ಸಿದ್ಧರಾಮಯ್ಯ ಅವರೇ, ಸಾರಿಗೆ ಸಂಸ್ಥೆಗಳು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೊಂಡು ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ. ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗಳನ್ನ ದಿವಾಳಿ ಮಾಡಿದ ಕುಖ್ಯಾತಿ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ನಿಮ್ಮ ದುರಾಡಳಿತದಿಂದ ಬಸ್ ನಿಲ್ದಾಣಗಳನ್ನೂ ಲೀಸ್‌ಗಿಡುವ ಹೀನಾಯ ಸ್ಥಿತಿಗೆ ಇಂದು KSRTC ಸಂಸ್ಥೆ ತಲುಪಿದೆ. ನಿಮ್ಮ ಕಾರ್ಯವೈಖರಿಗೆ ಇದಕ್ಕಿಂತ ಸಾಕ್ಷಿ ಬೇಕಾ?
ಒಂದೆಡೆ, ಈಗಾಗಲೇ 15-30% ಟಿಕೆಟ್ ದರ ಏರಿಕೆ ಮಾಡಿದ್ದೀರಿ, ಮತ್ತೊಂದೆಡೆ KSRTC ಸಂಸ್ಥೆಯನ್ನ 2,000 ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೀರಿ. ನೌಕರರಿಗೆ 1,800 ಹಿಂಬಾಕಿ ಉಳಿಸಿಕೊಂಡಿದ್ದೀರಿ, ನಿಗಮಗಳಿಗೆ 6,000 ಕೋಟಿ ರೂಪಾಯಿ ಬಾಕಿ ಇದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಅರ್ಥಿಕ ಪರಿಸ್ಥಿತಿ ನಿಭಾಯಿಸಲು ಬಸ್ ನಿಲ್ದಾಣಗಳನ್ನು ಹರಾಜು ಹಾಕಿದರೂ ಅಚ್ಚರಿಯಿಲ್ಲ!
2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ಸಂಸ್ಥೆಗಳಲ್ಲಿ ₹1,000 ಕೋಟಿಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಸಾರಿಗೆ ನಿಗಮಗಳಲ್ಲಿ 25,000 ಜನರಿಗೆ ಕಾಯಂ ಉದ್ಯೋಗ ಕೊಟ್ಟಿದ್ದೆ. ಪ್ರಯಾಣಿಕರಿಗೆ ಗುಣಮಟ್ಟದ ನಿಲ್ದಾಣ ಮತ್ತು ಬಸ್ ಸೇವೆ, ಇಂಧನ ಉಳಿತಾಯ, ಜೈವಿಕ ಇಂಧನ ಬಳಕೆ ಮತ್ತಿತರ ಕಾರ್ಯದಕ್ಷತೆ ಗಮನಿಸಿ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯಕ್ಕೆ 30ಕ್ಕೂ ಹೆಚ್ಚು ಪ್ರಶಸ್ತಿ ನೀಡಿತ್ತು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟ ಆಗಿದ್ದು ನಿಜ. ಆದರೆ ಬೇರೆ ರಾಜ್ಯಗಲ್ಲಿ ಸಾರಿಗೆ ನೌಕರರಿಗೆ ಸಂಬಳವೂ ಕೊಡದಿದ್ದ ಸಂದರ್ಭದಲ್ಲೂ ನಾವು ವೇತನ ಕೊಟ್ಟಿದ್ದೇವೆ. ಅದು ಕಾರ್ಮಿಕರ ಕಲ್ಯಾಣದ ಬಗ್ಗೆ ನಮ್ಮ ಪಕ್ಷದ ಬದ್ಧತೆ. ನಮ್ಮ ಪಕ್ಷವಾಗಲಿ, ನಾನಾಗಲಿ ತಮ್ಮಿಂದ ಆಡಳಿತದ ಪಾಠ ಕಲಿಯಬೇಕಿಲ್ಲ ಎಂಬುದಾಗಿ ತಿರುಗೇಟು ನೀಡಿದ್ದಾರೆ.
ಸಿಎಂ @siddaramaiah ಅವರೇ,
ಸಾರಿಗೆ ಸಂಸ್ಥೆಗಳು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೊಂಡು ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ. ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗಳನ್ನ ದಿವಾಳಿ ಮಾಡಿದ ಕುಖ್ಯಾತಿ ನಿಮ್ಮ @INCKarnataka ಸರ್ಕಾರಕ್ಕೆ… https://t.co/MsBj332asp pic.twitter.com/haOdEHc1Jh
— R. Ashoka (@RAshokaBJP) August 5, 2025
ಉತ್ತರಾಖಂಡ್ ಮೇಘಸ್ಫೋಟ: 8 ರಿಂದ 10 ಭಾರತೀಯ ಸೈನಿಕರು ನಾಪತ್ತೆ | Uttarkashi cloudburst
ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ