ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ ಜೊತೆಗೆ ಇಂದು ಮಾತನಾಡಿ, ಕ್ಷಮೆ ಯಾಚಿಸಿದ್ದಾರೆ.
ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ನೇಹಾ ಮನೆಗೆ ಭೇಟಿ ನೀಡಿದರು. ನೇಹಾ ಅವರ ತಂದೆ ನಿರಂಜನಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ನಿರಂಜನ ಜೊತೆಗೆ ದೂರವಾಣಿ ಕರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದರು.
ನಿರಂಜನ ಅವರಿಗೆ ನಿಮ್ಮ ಜೊತೆಗೆ ನಾವು ಇದ್ದೇವೆ. ಯಾವುದೇ ಆತಂಕ ಬೇಡ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ವೆರಿ ಸಾರಿ ಎಂಬುದಾಗಿಯೂ ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ದೇವೇಗೌಡರನ್ನು ಕಾಂಗ್ರೆಸ್ ಪ್ರಧಾನಿ ಮಾಡಿದೆ, ಆದ್ರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೋ ಗೊತ್ತಿಲ್ಲ: ಡಿಕೆಶಿ
ಅಶ್ಲೀಲ ವಿಡಿಯೋ ವೈರಲ್ ಮಾಡಿದ ಗೆಳೆಯ : ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!