ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಇಂದು ಅವರ ನೇತೃತ್ವದಲ್ಲಿ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆದಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಇಂದು ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಸಲ್ಲಿಸಿ ಅನುಮೋದನೆ ಪಡೆದರು.
ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ಬಳಿಕ ವಿಧಾನಸಭೆಗೆ ತೆರಳಿ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2024-25 ಅನ್ನು ಮಂಡಿಸಲಿದ್ದಾರೆ.