ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಚೊಚ್ಚಲ 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಪ್ರತಿಯನ್ನು ಪಡೆದಂತ ಅವರು, ಇದೀಗ ವಿಧಾನಸೌಧಕ್ಕೆ ಬಜೆಟ್ ಮಂಡನೆ ಮಾಡೋದಕ್ಕೆ ಆಗಮಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನಾ ಕಾವೇರಿ ನಿವಾಸದಲ್ಲಿ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರಿಂದ ರಾಜ್ಯ ಬಜೆಟ್ ಪ್ರತಿಯನ್ನು ಪಡೆದರು. ರಾಜ್ಯ ಬಜೆಟ್ ಪ್ರತಿಯನ್ನು ಪಡೆದ ನಂತ್ರ, ಸಾರ್ವಜನಿಕವಾಗಿ ಸಿಎಂ ಸಿದ್ಧರಾಮಯ್ಯ ಪ್ರದರ್ಶಿಸಿದರು.
ಹಣಕಾಸು ಇಲಾಖೆಯ ಅಧಿಕಾರಿಗಳಿಂದ ರಾಜ್ಯ ಬಜೆಟ್ ಪಡೆದಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದೀಗ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಅಲ್ಲಿ ನಡೆಯುವಂತ ಬಜೆಟ್ ಪೂರ್ವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ಆ ನಂತ್ರ ಬೆಳಿಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ 16ನೇ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ.