Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಜಿತ್ ಪವಾರ್ ಸಾವನ್ನಪ್ಪಿದ ಚಾರ್ಟರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

29/01/2026 11:06 AM

BIG NEWS : ಪತ್ನಿ `ಸೆಕ್ಸ್’ಗೆ ನಿರಾಕರಿಸುವುದು ವಿಚ್ಛೇದನಕ್ಕೆ ಕಾರಣವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

29/01/2026 11:04 AM

Government jobs : ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ `ಟಾಪ್-10 ಸರ್ಕಾರಿ ಉದ್ಯೋಗಗಳು’ ಯಾವು ಗೊತ್ತಾ?

29/01/2026 10:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ
KARNATAKA

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ

By kannadanewsnow0913/09/2024 5:02 PM

ಮಾಗಡಿ : ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ

ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.

ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಮೋದಿಯವರು ಬಂಡವಾಳಶಾಹಿಗಳ ಪರ

ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಇಬ್ಬರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike

Share. Facebook Twitter LinkedIn WhatsApp Email

Related Posts

Government jobs : ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ `ಟಾಪ್-10 ಸರ್ಕಾರಿ ಉದ್ಯೋಗಗಳು’ ಯಾವು ಗೊತ್ತಾ?

29/01/2026 10:50 AM2 Mins Read

BIG NEWS : ಬೆಂಗಳೂರಲ್ಲಿ ಘೋರ ದುರಂತ : ಗೇಟ್ ಮುರಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ದುರ್ಮರಣ!

29/01/2026 10:40 AM1 Min Read

Success Habits :  ಕೇವಲ ಕಠಿಣ ಪರಿಶ್ರಮದಿಂದ ಹಣ ಗಳಿಸಲು ಸಾಧ್ಯವಿಲ್ಲ : ಕೋಟ್ಯಾಧಿಪತಿಗಳು ಅನುಸರಿಸುವ 5 ‘ಗೋಲ್ಡನ್ ರೂಲ್ಸ್’ ಇಲ್ಲಿವೆ.!

29/01/2026 10:34 AM2 Mins Read
Recent News

ಅಜಿತ್ ಪವಾರ್ ಸಾವನ್ನಪ್ಪಿದ ಚಾರ್ಟರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

29/01/2026 11:06 AM

BIG NEWS : ಪತ್ನಿ `ಸೆಕ್ಸ್’ಗೆ ನಿರಾಕರಿಸುವುದು ವಿಚ್ಛೇದನಕ್ಕೆ ಕಾರಣವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

29/01/2026 11:04 AM

Government jobs : ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ `ಟಾಪ್-10 ಸರ್ಕಾರಿ ಉದ್ಯೋಗಗಳು’ ಯಾವು ಗೊತ್ತಾ?

29/01/2026 10:50 AM

BIG NEWS : ಬೆಂಗಳೂರಲ್ಲಿ ಘೋರ ದುರಂತ : ಗೇಟ್ ಮುರಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ದುರ್ಮರಣ!

29/01/2026 10:40 AM
State News
KARNATAKA

Government jobs : ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ `ಟಾಪ್-10 ಸರ್ಕಾರಿ ಉದ್ಯೋಗಗಳು’ ಯಾವು ಗೊತ್ತಾ?

By kannadanewsnow5729/01/2026 10:50 AM KARNATAKA 2 Mins Read

ಭಾರತದಲ್ಲಿ ಸರ್ಕಾರಿ ಉದ್ಯೋಗಗಳು ಉದ್ಯೋಗ ಭದ್ರತೆಯನ್ನು ಮಾತ್ರವಲ್ಲದೆ ಗೌರವ, ಸವಲತ್ತುಗಳು ಮತ್ತು ಆಕರ್ಷಕ ಸಂಬಳಗಳನ್ನು ಸಹ ನೀಡುತ್ತವೆ.ಇದಕ್ಕಾಗಿಯೇ ದೇಶದ ಹೆಚ್ಚಿನ…

BIG NEWS : ಬೆಂಗಳೂರಲ್ಲಿ ಘೋರ ದುರಂತ : ಗೇಟ್ ಮುರಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ದುರ್ಮರಣ!

29/01/2026 10:40 AM

Success Habits :  ಕೇವಲ ಕಠಿಣ ಪರಿಶ್ರಮದಿಂದ ಹಣ ಗಳಿಸಲು ಸಾಧ್ಯವಿಲ್ಲ : ಕೋಟ್ಯಾಧಿಪತಿಗಳು ಅನುಸರಿಸುವ 5 ‘ಗೋಲ್ಡನ್ ರೂಲ್ಸ್’ ಇಲ್ಲಿವೆ.!

29/01/2026 10:34 AM

‘ಸಾಗರ ಜಿಲ್ಲಾ ಹೋರಾಟ ಸಮಿತಿ’ಯಿಂದ ಸಿಎಂ ಸಿದ್ಧರಾಮಯ್ಯ ಭೇಟಿ: ಜಿಲ್ಲೆ ರಚನೆಗೆ ಶಾಸಕ ಬೇಳೂರು ನೇತೃತ್ವದಲ್ಲಿ ಮನವಿ

29/01/2026 10:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.