ಬೆಂಗಳೂರು: ಹುಬ್ಬಳ್ಳಿ-ಧಾರವಾಡದ ಜಿಲ್ಲಾಧಿಕಾರಿಗಳು ಬೀದಿ ಬದಿಯ ವ್ಯಾಪಾರಿಗಳಿಗೆ ಅನಗತ್ಯವಾಗಿ ತೊಂದರೆ ಕೊಡುತ್ತಿದ್ದಾರೆ ಅನ್ನುವ ದೂರವನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದರು. ಸ್ಥಳದಲ್ಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಪುಲ್ ಕ್ಲಾಸ್ ತಗೊಂಡರು.
ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.
ಇದಕ್ಕೆ ಗರಂ ಆದ ಸಿಎಂ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎನ್ನುವ ಸೂಚನೆ ನೀಡಿದರು.
BREAKING : ಬೆಳಗಾವಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಪತ್ನಿಯ ಹತ್ಯೆ ಮಾಡಿ ಪಾಪಿ ಗಂಡ ಎಸ್ಕೇಪ್!