ಬೆಂಗಳೂರು: ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಒಂದು ಗುದ್ದಿ ಗಾಯಗೊಂಡಿದ್ದರು. ಗಲ್ಲ, ತಲೆಗೆ ಪೆಟ್ಟು ಬಿದ್ದಿರುವಂತ ಅವರನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂತಹ ಅವರಿಗೆ ಸಿಎಂ ಸಿದ್ಧರಾಮಯ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿತ್ತು.
ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.
ಇಂತಹ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಅವರ ಆರೋಗ್ಯ ವಿಚಾರಿಸಿದರು. ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ತಿಳಿಸಿದರು. ಮತ್ತೊಂದೆಡೆ ಶಾಸಕ ಯಾಸೀರ್ ಖಾನ್ ಕೂಡ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಭೇಟಿ ನೀಡಿ, ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಆರೋಗ್ಯ ವಿಚಾರಿಸಿದರು.
ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ನಾಳೆ ದಾವಣಗೆರೆಯಲ್ಲಿ ಬೃಹತ್ ಉದ್ಯೋಗ ಮೇಳ