ಬೆಂಗಳೂರು : ಭೂಕುಸಿತದಿಂದ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೂರವಾಣಿ ಮೂಲಕ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.