ಚಿತ್ರದುರ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇನ್ನೊಂದೆಡೆ ವಿಪಕ್ಷ ನಾಯಕರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಕುರಿತಾಗಿ ಬಿ ವೈ ವಿಜಯೇಂದ್ರ ಅವರು ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದು ಅಹಿಂದಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದು ಅಹಿಂದಕ್ಕೆ ಮೋಸ ಮಾಡಿದ್ದಾರೆ. ವಾಲ್ಮೀಕಿ ಮುಡಾ ಹಗರಣದಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ. ಜನತೆ ಸಿಎಂ ಮತ್ತು ಸರ್ಕಾರದ ವಿರುದ್ಧ ಧ್ವನಿ ಎತ್ತುತಿದ್ದಾರೆ ಬಿಜೆಪಿ ರಾಜ್ಯಪಾಲರು ಏನು ಹೇಳಿದ್ದಾರೆ ಎಂಬುದು ಬದಿಗಿಡಿ, ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲಿ ಎಂದು ಅವರು ಒತ್ತಾಯಿಸಿದರು.