Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ಉಕ್ರೇನ್ ಮೇಲೆ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಡ್ರೋನ್ ದಾಳಿ: ಭಯಾನಕ ವೀಡಿಯೋ ನೋಡಿ

01/06/2025 7:08 PM

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಗೃಹ ಸಚಿವ ‘ಅಮಿತ್ ಶಾ’ಗೆ ಈ ಸವಾಲು ಹಾಕಿದ ‘ಸಿಎಂ ಸಿದ್ಧರಾಮಯ್ಯ’
KARNATAKA

ಕೇಂದ್ರ ಗೃಹ ಸಚಿವ ‘ಅಮಿತ್ ಶಾ’ಗೆ ಈ ಸವಾಲು ಹಾಕಿದ ‘ಸಿಎಂ ಸಿದ್ಧರಾಮಯ್ಯ’

By kannadanewsnow0911/02/2024 1:20 PM

ಬೆಂಗಳೂರು: ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ. ಈ ಮೂಲಕ ನಿಮ್ಮ ಧಮ್ಮು, ತಾಕತ್ತು ತೋರಿಸಿ ಎಂಬುದಾಗಿ ಅಮಿತ್ ಶಾ ಅವರಿಗೆ ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಪ್ರಶ್ನಿಸಿದ್ದಾರೆ.

ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ‘’ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಹಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಹಾ ಅವರಿಗೆ ನನ್ನ ಸವಾಲು ಕೂಡಾ ಹೌದು ಎಂದಿದ್ದಾರೆ.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರಮೋದಿ, ಅಮಿತ್ ಶಹಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾಧ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡಿನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾರೆ. ನಾವು ಕಿಲೋಗೆ ರೂ.33ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕಿಲೋಗೆ ರೂ.29ರಂತೆ ಮಾರಾಟ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ ಎಂದು ಗುಡಿಗಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ದ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಹಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಹಾ ಸಾಧನೆಗಳು. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಹಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಹಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಬಡವರ ಕಷ್ಟ ಕಡಿಮೆ ಮಾಡುವ ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ನಾನು ತಿಳಿದುಕೊಂಡವನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕೊಟ್ಟು ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದಿದ್ದಾರೆ.

ನನ್ನ ವಿರುದ್ಧ ‘ನೂರು FIR’ ದಾಖಲಿಸಿದ್ರೂ ಹೆದರಲ್ಲ – ಕೆ.ಎಸ್ ಈಶ್ವರಪ್ಪ

ಲೋಕಸಭಾ ಚುನಾವಣೆ 2024 : ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ಫುಲ್ ಆಕ್ಟಿವ್ 

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM1 Min Read

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM1 Min Read

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM1 Min Read
Recent News

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

ಉಕ್ರೇನ್ ಮೇಲೆ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಡ್ರೋನ್ ದಾಳಿ: ಭಯಾನಕ ವೀಡಿಯೋ ನೋಡಿ

01/06/2025 7:08 PM

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM
State News
KARNATAKA

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

By kannadanewsnow0501/06/2025 7:10 PM KARNATAKA 1 Min Read

ಚಿಕ್ಕಮಗಳೂರು : ಚಾಲಕನ ನಿಯಂತ್ರಣದ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ…

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.