ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸಾರಿಗೆ ಬಸ್ ಪ್ರಯಾಣದ ದರ ಶೇ.15ರಷ್ಟು ಹೆಚ್ಚಾಗಿದೆ. ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇದರ ನಡುವೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದಿದ್ದಾರೆ.
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ.
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು.ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ…
— CM of Karnataka (@CMofKarnataka) January 5, 2025
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
* ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ.
* ಒಳಮೀಸಲಾತಿ ನೀಡಬೇಕೆಂದು…
— CM of Karnataka (@CMofKarnataka) January 5, 2025
BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ’ ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!