Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
KARNATAKA

BIG NEWS: ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

By kannadanewsnow0928/05/2024 8:10 PM

ಬೆಂಗಳೂರು: 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ ಎಂದಿದ್ದಾರೆ.

ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿಗಳೇ ಗಮನಿಸಿ: ಜೂ.1ರಿಂದ ‘BMTC ಬಸ್ ಪಾಸ್’ ವಿತರಣೆ ಆರಂಭ

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.