ಬೆಂಗಳೂರು: ಇಂದು ಕ್ಯಾನ್ಸರ್ ನಿಂದ ಬಳಲುತ್ತಿದ್ದಂತೆ ಅಚ್ಚಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/VKcta8xr9z
— CM of Karnataka (@CMofKarnataka) July 11, 2024