ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳನ್ನು ಸೂಚಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. pic.twitter.com/D3y4Ep2H8J— Siddaramaiah (@siddaramaiah) September 24, 2025