ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಇಂದು ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ನಿಧರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು ಎಂದಿದ್ದಾರೆ. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು … Continue reading ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ