Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ

08/12/2025 3:35 PM

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

08/12/2025 3:29 PM

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ
KARNATAKA

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

By kannadanewsnow0908/12/2025 3:29 PM

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು.

ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು.
ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು ಸಜ್ಜನ ರಾಜಕಾರಣಿ ರಾಜಕೀಯ ತತ್ವಗಳನ್ನು ತಪ್ಪದೇ ಪಾಲಿಸುತ್ತಿದ್ದ ಅವರು ಜನರೊಂದಿಗೆ ಬೆರೆಯುವ ಗುಣವಿದ್ದ ಮೇಟಿಯವರು, ಜಾತ್ಯಾತೀತ ತತ್ವದ ಪಾಲಕರಾಗಿದ್ದರು. ಅವರು ಎಲ್ಲ ಜಾತಿ-ಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು ಎಂದು ಸ್ಮರಿಸಿದರು.

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್ ಅವರ ಬಗ್ಗೆ ಮಾತನಾಡುತ್ತಾ ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದ ಆರ್.ವಿ.ದೇವರಾಜ್ ಅವರು, ಉತ್ತಮ ಸಂಘಟಕರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.

ಆರ್.ವಿ. ದೇವರಾಜ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ದೇವರಾಜು ಅವರು, 1989ರ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ್ತು 1999 ಹಾಗೂ 2013ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

2004 ರಿಂದ 2010 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿಗೆ ಹೋಗಿದ್ದ  ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜ್ ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಸಂತಾಪ ಸೂಚಿಸಿದರು.

ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್, ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

1999ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 11ನೇ ವಿಧಾನಸಭೆಗೆ ಚುನಾಯಿತರಾಗಿದ್ದರು. ಕ್ಷೇತ್ರದ ಜನರ ಹಾಗೂ ರೈತರ ಪರವಾಗಿ ಸದಾ ಶ್ರಮಿಸುತ್ತಿದ್ದರು
ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ಒಬ್ಬ ಮುಸ್ಸದ್ದಿ ಹಾಗೂ ರೈತರ ಪರ ನಾಯಕನನ್ನು ಕಳೆದುಕೊಂದಂತಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಶತಾಯುಷಿ ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಸುಮಾರು 4,000 ಕ್ಕೂ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಹೆಸರು ವಾಸಿಯಾಗಿದ್ದರು.

ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ.

ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡೋಜ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಪರಿಸರದ ಬಗೆಗಿನ ಇವರ ಅತೀವ ಕಾಳಜಿಯನ್ನು ಪರಿಗಣಿಸಿ ಸರ್ಕಾರವು ಇವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಪರಿಸರ ರಾಯಭಾರಿಯನ್ನಾಗಿ ನೇಮಿಸಿತ್ತು.

ಅರಣ್ಯ ಇಲಾಖೆಯ ವತಿಯಿಂದ ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಕೊಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದೇವೆ. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು .

ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಕುರಿತು ಮಾತನಾಡಿ ಎಸ್.ಎಲ್.ಬೈರಪ್ಪ ಕನ್ನಡ ಸಾಹಿತ್ಯ ಲೋಕದ ದಿಗ್ಗಜರಲ್ಲಿ ಒಬ್ಬರಾಗಿದ್ದವರು. ಇವರ ಹಲವು ಪುಸ್ತಕಗಳು ಇಂಗ್ಲೀಷ್ ಸೇರಿದಂತೆ ಭಾರತದ ವಿವಿಧ ಭಾಷೆಗಳಿಗೆ ಅನುವಾದಗೊಂಡಿವೆ.

1931ರ ಆಗಸ್ಟ್ 20 ರಂದು  ಹಾಸನ ಜಿಲ್ಲೆ ಸಂತೆಶಿವರ ಗ್ರಾಮದಲ್ಲಿ ಜನಿಸಿದ್ದ ಭೈರಪ್ಪನವರು, ಕಿತ್ತು ತಿನ್ನುವ ಬಡತನದ ನಡುವೆಯೂ ಅತಿ ಎತ್ತರಕ್ಕೆ ಬೆಳೆದ ವ್ಯಕ್ತಿತ್ವ. ಎಂದರು. ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಾಲೇಜು, ಗುಜರಾತ್‌ನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯ, ದೆಹಲಿಯ ಎನ್‌ಸಿಇಆರ್‌ಟಿ ಮತ್ತು ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನಲ್ಲಿ ತರ್ಕ ಮತ್ತು ಮನೋವಿಜ್ಞಾನದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

ಇಂಗ್ಲೀಷ್‌ನಲ್ಲಿ ರಚಿಸಿದ “ಸತ್ಯ ಮತ್ತು ಸೌಂದರ್ಯ” ಎಂಬ ಮಹಾ ಪ್ರಬಂಧಕ್ಕೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಗಳಿಸಿದ್ದರು.

ಹುಬ್ಬಳ್ಳಿ, ಗುಜರಾತ್, ದೆಹಲಿಯಲ್ಲಿ ಉಪನ್ಯಾಸಕ ವೃತ್ತಿ ಕೈಗೊಂಡಿದ್ದ ಭೈರಪ್ಪನವರು, ನಾಲ್ಕು ದಶಕಗಳಲ್ಲಿ 25 ಕಾದಂಬರಿಗಳನ್ನು ಬರೆದಿದ್ದಾರೆ. 1999ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಪರ್ವ’ ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಸೇರಿದಂತೆ ಹಲವು ಕಾದಂಬರಿಗಳು ಮರಾಠಿ ಓದುಗರ ಮೆಚ್ಚುಗೆಗೂ ಪಾತ್ರವಾಗಿದ್ದವು.

ವಂಶವೃಕ್ಷಕ್ಕೆ 1966ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲಿಯೇ ‘ಪರ್ವ’ ಅತ್ಯಂತ ಜನಪ್ರಿಯ. 94 ವರ್ಷ ಪೂರೈಸಿದರೂ ಸಹ ಇಂದಿಗೂ ಸಹ ಭೈರಪ್ಪನವರು ಜೀವನದ ಬಗೆಗಿನ ಉತ್ಸಾಹವನ್ನು ಹಾಗೆಯೇ ಉಳಿಸಿಕೊಂಡಿದ್ದರು.

ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ಎನ್.ಟಿ.ಆರ್ ರಾಷ್ಟ್ರೀಯ ಪ್ರಶಸ್ತಿ, ಡಾ: ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಭೈರಪ್ಪನವರು ತಮ್ಮದೇ ಆದ ದೊಡ್ಡ ಓದುಗ ಬಳಗವನ್ನ ಸೃಷ್ಟಿಸಿಕೊಂಡಿದ್ದರು.
ಅನನ್ಯ ಸಾಹಿತಿ, ಅತ್ಯಂತ ಸರಳ ವ್ಯಕ್ತಿತ್ವದ ಭೈರಪ್ಪ ಅವರ ನಿಧನದಿಂದ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವುಂಟಾಗಿದೆ ಎಂದರು.

ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ಅವರ ಕುರಿತು ಮಾತನಾಡಿ ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರಾಗಿದ್ದ ಉಮೇಶ್ ರವರು ತಮ್ಮ ವಿಶಿಷ್ಟ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನ ಗೆದ್ದವರು.

ಮೈಸೂರಿನಲ್ಲಿ ಜನಿಸಿದ ಉಮೇಶ್ ರವರಿಗೆ ಬಾಲ್ಯದಿಂದಲೇ ರಂಗಭೂಮಿಯ ನಂಟು. ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರ ‘ಜಗಜ್ಯೋತಿ ಬಸವೇಶ್ವರ’ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರದಲ್ಲಿ ಇವರ ಅಭಿನಯ ಎಲ್ಲರ ಗಮನ ಸೆಳೆದಿತ್ತು.

ಗುಬ್ಬಿ ವೀರಣ್ಣ, ಕೆ.ಹಿರಣ್ಣಯ್ಯ, ಎಂ.ಸಿ. ಮಹಾದೇವಸ್ವಾಮಿಯಂತಹ ರಂಗ ದಿಗ್ಗಜರ ಗರಡಿಯಲ್ಲಿ ಬೆಳೆದ ಉಮೇಶ್ ರವರು, ಹಲವು ದಶಕಗಳ ಕಾಲ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಸೇವೆ ಸಲ್ಲಿಸಿದರು.

‘ಕಥಾ ಸಂಗಮ’ ತಪ್ಪಿದ ತಾಳ, ಅನುಪಮ, ಕಾಮನ ಬಿಲ್ಲು, ಶೃತಿ ಸೇರಿದಾಗ, ಗಜಪತಿ ಗರ್ವಭಂಗ, ಗೋಲ್ ಮಾಲ್ ರಾಧಾಕೃಷ್ಣ, ಗುರು ಶಿಷ್ಯರು, ಡೇರ್ ಡೆವಿಲ್ ಮುಸ್ತಫಾ ಸೇರಿದಂತೆ ಸುಮಾರು 700ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಬಹುಮುಖ ಪ್ರತಿಭೆಯಾಗಿದ್ದ ಇವರು ನಟನೆಯ ಜೊತೆಗೆ ಪಿಯಾನೋ ವಾದಕರಾಗಿ, ಕುಂಚ ಕಲಾವಿದರಗಿ, ಹಾಡುಗಾರರಾಗಿಯೂ ಖ್ಯಾತಿ ಗಳಿಸಿದ್ದರು.

ಇವರ ಐದು ದಶಕಗಳ ಕಲಾ ಸೇವೆಯಲ್ಲಿ, ಅವರಿಗೆ ಕಥಾಸಂಗಮ ಚಿತ್ರದ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ ಪಡೆದಿದ್ದಾರೆ. ಅಲ್ಲದೇ, ನಾಟಕ ಅಕಾಡೆಮಿ ಪ್ರಶಸ್ತಿ, ಮಹಾನಗರ ಪಾಲಿಕೆ ಪ್ರಶಸ್ತಿ, ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಹಿರಿಯ ನಟ ಎಂ.ಎಸ್. ಉಮೇಶ್ ರವರ ನಿಧನದಿಂದ ಕನ್ನಡ ಚಿತ್ರರಂಗ ಅನುಭವಿ ಹಾಗೂ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದರು.

ಅಗಲಿದ ಎಲ್ಲರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿ, ಸಭಾಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನುಮೋದಿಸಿದರು.

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

ALERT : ನಿಮ್ಮ `ಮನೆಯಲ್ಲಿ `ಇನ್ವರ್ಟರ್’ ಬಳಸುತ್ತೀರಾ? ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.!

Share. Facebook Twitter LinkedIn WhatsApp Email

Related Posts

BREAKING: ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ

08/12/2025 3:35 PM1 Min Read

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM3 Mins Read

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM2 Mins Read
Recent News

BREAKING: ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ

08/12/2025 3:35 PM

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

08/12/2025 3:29 PM

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM
State News
KARNATAKA

BREAKING: ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ

By kannadanewsnow0908/12/2025 3:35 PM KARNATAKA 1 Min Read

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ…

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

08/12/2025 3:29 PM

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.