ಬೆಂಗಳೂರು: ಇದೇ ಮೊದಲ ಬಾರಿಗೆ ಐತಿಹಾಸಿಕ ದಾಖಲೆ ಎನ್ನುವಂತೆ ಭಾರತದ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯನ್ ಓಪನ್-2024ರ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನು ಬರೆದಿದ್ದರು. ಇಂತಹ ಅವರು ಕನ್ನಡಿಗರಾಗಿದ್ದು, ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.
ಭಾರತದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್ನಲ್ಲಿ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊನ್ಜಾಲೆಜ್ ಮತ್ತು ಆಂಡ್ರೆಸ್ ಮೊಲ್ಟೆನಿ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಜೋಡಿ 6-4ರಲ್ಲಿ ಸಮಬಲ ಸಾಧಿಸಿತು. 7-6 ಗೆಲುವು. ಬೋಪಣ್ಣ ಇತ್ತೀಚೆಗೆ ಡಬಲ್ಸ್ನಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಈ ಕುರಿತಂತೆ ಎಕ್ಸ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ, ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿರುವುದು ವಿಶೇಷ ಎಂದಿದ್ದಾರೆ.
ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದೆಂಬ ಮಾತು ಇವರ ಆಟ ನೋಡಿದವರಿಗೆ ಅನ್ನಿಸದೆ ಇರಲಾರದು. ಇಂತಹ ಇನ್ನಷ್ಟು ದಾಖಲೆಗಳು ರೋಹನ್ ಬೋಪಣ್ಣನವರಿಂದ ಮೂಡಿಬರಲೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ.
ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ… pic.twitter.com/v5zngGqII6— CM of Karnataka (@CMofKarnataka) January 27, 2024
BREAKING: ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ‘ಬಿಜೆಪಿ ಉಸ್ತುವಾರಿ’ಗಳು ನೇಮಕ, ಇಲ್ಲಿದೆ ಸಂಪೂರ್ಣ ಲೀಸ್ಟ್
BREAKING : ಭೂಮಿ ಹಗರಣ ಪ್ರಕರಣ : ಬಿಹಾರ ಮಾಜಿ ಸಿಎಂ ಲಾಲು ಪತ್ನಿ ರಾಬ್ರಿ ದೇವಿ, ಪುತ್ರಿಯರಿಗೆ ‘ಕೋರ್ಟ್ ಸಮನ್ಸ್’