ಬೆಂಗಳೂರು : ಕಾಂಗ್ರೆಸ್ ಶಾಸಕರು ಗೆ ಅವರ ಕ್ಷೇತ್ರಕ್ಕೆ ತಲಾ 50 ಕೋಟಿ ರೂಪಾಯಿ ಅನುದಾನ ನೀಡಿರುವ ವಿಚಾರವಾಗಿ ಹಾಗೂ ಇತರೆ ವಿಷಯಗಳು ಕುರಿತು ಇಂದಿನಿಂದ ಸಚಿವರು ಹಾಗೂ ಶಾಸಕರುಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ನಾಲ್ಕು ದಿನಗಳ ಕಾಲ ಸಭೆ ನಡೆಸಲಿದ್ದಾರೆ.
ಆದರೆ ಈ ಒಂದು ಸಭೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿಲ್ಲ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಾಸಕರ ಬಳಿ ಆಂತರಿಕವಾಗಿ ಅಸಮಾಧಾನ ಹೊರಹಾಕಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬದಿಗಿಟ್ಟು ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.
50 ಕೋಟಿ ಅನುದಾನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಶಾಸಕರುಗಳ ಜೊತೆಗೆ ಚರ್ಚಿಸಲಿದ್ದಾರೆ. ನೇರವಾಗಿ ಅವರ ಜೊತೆ ಇಂದಿನಿಂದ ನಾಲ್ಕು ದಿನಗಳ ಕಾಲ ಸಭೆ ನಡೆಸಲಿದ್ದಾರೆ. ಆದರೆ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡದಿರುವುದಕ್ಕೆ ಡಿಸಿಎಂ ಸಹಜವಾಗಿ ಅಸಮಾಧಾನಗೊಂಡಿದ್ದಾರೆ.