ಬೆಂಗಳೂರು : ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿಗಮದ ಅಧೀಕ್ಷಕ ರಾಗಿದ್ದ ಚಂದ್ರಶೇಖರನ್ ಅವರ ಸಾವಿಗೆ ನೇರವಾಗಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರಣರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಗಂಭೀರವಾದಂತಹ ಆರೋಪ ಮಾಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ, ತೆಲಂಗಾಣದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ. ಹಾಗಾಗಿ ಕಾಂಗ್ರೆಸ್ ಟು ಕಾಂಗ್ರೆಸ್ ಪ್ಲಾನ್ ಮಾಡಿದ್ದಾರೆ. ಇಡೀ ಕ್ಯಾಬಿನೆಟ್ ಕುಳಿತು ಪ್ಲಾನ್ ಮಾಡಿದ್ದಾರೆ. ಹಾಗಾಗಿ ರಾಜ್ಯದಿಂದ ತೆಲಂಗಾಣಕ್ಕೆ ಹಣ ವರ್ಗಾವಣೆ ಮಾಡಿ ಅಲ್ಲಿಂದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಹಣ ಕಳುಹಿಸುತ್ತಿದ್ದಾರೆ ಎಂದು ಅಶೋಕ್ ಗಂಭೀರವಾದ ಆರೋಪ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಈಗ ಸ್ಪಷ್ಟ ದಾಖಲೆಗಳು ಸಿಕ್ಕಿವೆ ಕಾಂಗ್ರೆಸ್ ನವರು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು ಕರ್ನಾಟಕದಿಂದ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಹೀಗೆ ಹಣ ಕಳುಹಿಸಲು ಹೈದರಾಬಾದ್ ಗೆ ಇಲ್ಲಿನ ಕಾಂಗ್ರೆಸ್ ಸರ್ಕಾರ ಹಣ ವರ್ಗಾವಣೆ ಮಾಡಿದೆ ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರವಾದ ಆರೋಪ ಮಾಡಿದರು.