ಬೆಂಗಳೂರು: 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ,ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್,ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ,ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು.
BIG NEWS: ರಾಜ್ಯದಲ್ಲಿ ‘ಅಕ್ರಮ ಮರ ಕಡಿತಲೆ’ ಮಾಡೋರಿಗೆ ಶಾಕ್: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಸಚಿವರ ಸೂಚನೆ
ಶಿವಮೊಗ್ಗ: ಮಾ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut