Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

ಅಮೇರಿಕಾದ 2ನೇ ಫೈಟರ್ ಜೆಟ್ ಎಫ್-35 ಹೊಡೆದುರುಳಿಸಿದ ಇರಾನ್: ಪೈಲಟ್ ಬದುಕುಳಿದಿರುವ ಸಾಧ್ಯತೆ ಕಡಿಮೆ

03/04/2026 1:53 PM

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

03/04/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸರ್ಕಾರದಿಂದ ಕಡಿಮೆ ಬರಪರಿಹಾರ ಬಿಡುಗಡೆ: ಸಿ.ಎಂ.ಸಿದ್ದರಾಮಯ್ಯ ಅಸಮಾಧಾನ
KARNATAKA

ಕೇಂದ್ರ ಸರ್ಕಾರದಿಂದ ಕಡಿಮೆ ಬರಪರಿಹಾರ ಬಿಡುಗಡೆ: ಸಿ.ಎಂ.ಸಿದ್ದರಾಮಯ್ಯ ಅಸಮಾಧಾನ

By kannadanewsnow0727/04/2024 1:36 PM

ಕಲಬುರಗಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯ 18,172 ಕೋಟಿ ರೂ. ಪರಿಹಾರ ಕೇಳಿದ್ದೇವೆ, 35 ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿದ್ದು, 48 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿತ್ತ ಮಂತ್ರಿ ನಿರ‍್ಮಲಾ ಸೀತಾರಾಂ ಅವರು ರಾಜ್ಯ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಸುಳ್ಳು ಹೇಳಿದ್ದಾರೆ ಎಂದರು.

ಆಮೇಲೆ ನಿರ್ಮಲಾ ಸೀತಾರಾಮನ್‌ ಅವರು ಇವರು ಬರಗಾಲಕ್ಕೆ ಮನವಿ ಕೊಟ್ಟಿಲ್ಲ, ಗ್ಯಾರಂಟಿಗಳಿಗೆ ಹಣ ಕೇಳಿದ್ದಾರೆ ಎಂದರು. ನಾವು ಗ್ಯಾರಂಟಿಗಳಿಗೆ ಒಂದು ಪೈಸವೂ ಕೇಳಿಲ್ಲ, ಕೇಳೋದೂ ಇಲ್ಲ. ಇಬ್ಬರೂ ಸುಳ್ಳು ಹೇಳಿದರು ಎಂದು ಸ್ಪಷ್ಟ ಪಡಿಸಿದರು.

ʼನಾನು ಡಿಸೆಂಬರ್‌ 19 ರಂದು ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಕುರಿತು ಅವರ ಗಮನಕ್ಕೆ ತಂದು, 18172 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಿದ್ದು, ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆನು. ಅದಕ್ಕೆ ಅವರು ಕೂಡಲೇ ಸಂಬಂಧಪಟ್ಟವರಿಗೆ ತಿಳಿಸುವುದಾಗಿ ನುಡಿದರು.

ಡಿಸೆಂಬರ್‌ 20 ರಂದು ಅಮಿತ್‌ ಷಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್‌ 23 ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ತೀರ್ಮಾನ ಮಾಡುವುದಾಗಿ ತಿಳಿಸಿದರು. ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದ ನಂತರ ತೀರಾ ಕಡಿಮೆ ಪರಿಹಾರ ಒದಗಿಸಿದ್ದಾರೆ. ನಾವು 18174 ಕೋಟಿ ಕೇಳಿದರೆ ಅವರು 3454 ಕೋಟಿ ಕೊಟ್ಟಿದ್ದಾರೆ. ಅತ್ಯಂತ ಕಡಿಮೆಯಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು” ಎಂದು ಸಿದ್ದರಾಮಯ್ಯ ಅವರು ತಿಳಿಸಿದರು..

ಸುಪ್ರೀಂ ಕೋರ್ಟ್‌ ಮುಂದೆ ರಿಟ್‌ ಪೆಟಿಷನ್‌ ಹಾಕಿದಾಗ ಭಾರತ ಸರ್ಕಾರದ ಪರವಾಗಿ ಅಟಾರ್ನಿ ಜನರಲ್‌ ಮತ್ತು ಸಾಲಿಟಿಸಿಟರ್‌ ಜನರಲ್‌ ಹಾಜರಾದರು. ಅವರು ನಿರ್ಮಲಾ ಸೀತಾರಾಮನ್‌ ಹೇಳುವ ಮಾತುಗಳಾಗಲಿ, ಅಮಿತ್‌ ಷಾ ಹೇಳುವ ಮಾತುಗಳನ್ನಾಗಲಿ ಸಲ್ಲಿಸಿಲ್ಲ. ಅವರು ಹೇಳಿದ್ದು ನಿಜವೇ ಆಗಿದ್ದರೆ ಅವರ ಹೇಳಿಕೆಗಳನ್ನು ಹೇಳಲಿಲ್ಲ. ಸುಪ್ರೀಂ ಕೋರ್ಟ್‌ ಅವರಿಗೆ ರಾಜ್ಯ ಸರ್ಕಾರಗಳು ಇಂತಹ ವಿಚಾರಗಳಲ್ಲಿ ಕೋರ್ಟ್‌ ಮೊರೆ ಹೋಗುವುದು ಸರಿ ಇಲ್ಲ. ಈ ವಿಷಯವನ್ನು ಬೇಗನೆ ಇತ್ಯರ್ಠ ಮಾಡಿ ಎಂದು ಹೇಳಿದ್ದಕ್ಕೆ ಅವರು ಎರಡು ವಾರಗಳ ಸಮಯಾವಕಾಶ ಕೇಳಿದ್ದರು. ಎರಡು ವಾರವಾದ ಮೇಲೆ ಇನ್ನೂ ಒಂದು ವಾರ ಸಮಯ ಕೇಳಿದ್ದಾರೆ. ಈಗ 28ಕ್ಕೆ ಪ್ರಕರಣ ವಿಚಾರಣೆಗೆ ಬರಲಿದೆ. ಈ ನಡುವೆ ಕೇಂದ್ರ ಸರ್ಕಾರ 3454 ಕೋಟಿ ಕೊಟ್ಟಿದ್ದಾರೆ. ನಾವು ಕೇಳಿದ ಮೊತ್ತದ ನಾಲ್ಕನೇ ಒಂದು ಭಾಗಕ್ಕಿಂತಲೂ ಕಡಿಮೆಯಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Cm Siddaramaiah expresses displeasure over centre's release of less drought relief
Share. Facebook Twitter LinkedIn WhatsApp Email

Related Posts

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM2 Mins Read

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM1 Min Read

ಮಗನನ್ನ ರಾಜಕೀಯಕ್ಕೆ ತಂದು ವಸೂಲಿ ಮಾಡುತ್ತಿರುವ ಸಿಎಂಗೆ, ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : HDK

03/04/2026 1:38 PM1 Min Read
Recent News

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

ಅಮೇರಿಕಾದ 2ನೇ ಫೈಟರ್ ಜೆಟ್ ಎಫ್-35 ಹೊಡೆದುರುಳಿಸಿದ ಇರಾನ್: ಪೈಲಟ್ ಬದುಕುಳಿದಿರುವ ಸಾಧ್ಯತೆ ಕಡಿಮೆ

03/04/2026 1:53 PM

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

03/04/2026 1:45 PM

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM
State News
KARNATAKA

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

By kannadanewsnow0503/04/2026 2:38 PM KARNATAKA 2 Mins Read

ಹೃದಯಾಘಾತ (Heart Attack) ಎಂಬುದು ಇದ್ದಕ್ಕಿದ್ದಂತೆ ಸಂಭವಿಸುವ ಘಟನೆಯಂತೆ ಕಂಡರೂ, ವಾಸ್ತವದಲ್ಲಿ ದೇಹವು ಅದರ ಮುನ್ಸೂಚನೆಗಳನ್ನು ಕೆಲವು ದಿನಗಳ ಅಥವಾ…

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM

ಮಗನನ್ನ ರಾಜಕೀಯಕ್ಕೆ ತಂದು ವಸೂಲಿ ಮಾಡುತ್ತಿರುವ ಸಿಎಂಗೆ, ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : HDK

03/04/2026 1:38 PM

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

03/04/2026 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.