ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಂತೆ ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಈ ಯೋಜನೆಗೆ HRMS ವ್ಯವಸ್ಥೆಯಡಿ ಸರ್ಕಾರಿ ನೌಕರರ ನೋಂದಾವಣೆಯನ್ನು ಕೈಗೊಳ್ಳಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಗಳ 6 ಲಕ್ಷ ನೌಕರರು ಸೇರಿದಂತೆ ಅವರ ಕುಟುಂಬದ ಸದಸ್ಯರನ್ನು ಒಳಗೊಂಡಂತೆ ಅಂದಾಜು 25 ಲಕ್ಷ ಫಲಾನುಭವಿಗಳು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಪಡೆಯಲಿದ್ದಾರೆ.
ಈ ಯೋಜನೆಯಡಿ ಮೊದಲನೇ ಹಂತದಲ್ಲಿ ಸರ್ಕಾರಿ ನೌಕರರು ಅಂದಾಜು 2000 ಒಳರೋಗಿ ಚಿಕಿತ್ಸಾ ವಿಧಾನಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ನೋಂದಾಯಿತವಾದ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್