ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ. ಈ ಮೂಲಕ ಗ್ರಾಮ ಪಂಚಾಯ್ತಿ ಸದಸ್ಯರು, ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ.
ಗ್ರಾಪಂ ಸದಸ್ಯರು, ಅಧಿಕಾರಿಗಳ ಸಮಸ್ಯೆಗಳ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದ ಶಾಸಕ ದಿನೇಶ್ ಗೂಳಿಗೌಡ ಅವರು, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರು. ಅಲ್ಲದೆ, ಬೇಡಿಕೆಗಳ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ಒತ್ತಾಯಿಸಿದ್ದರು. ಈಗ ಈ ಬಗ್ಗೆ ಶಾಸಕರ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ತಜ್ಞರ ಸಮಿತಿ ರಚನೆ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಮಂಡಿಸಲು ಸೂಚಿಸಿದ್ದಾರೆ.
ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಮಸ್ಯೆಗಳ ಅಧ್ಯಯನ ಹಾಗೂ ಇತ್ಯರ್ಥಕ್ಕೆ ತಜ್ಞರ ತಂಡವನ್ನು ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೌಕರರ ಪರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಗೂ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.
BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ13 ಆರೋಪಿ ದೀಪಕ್ ಗೆ ಜಾಮೀನು, A-1 ಪವಿತ್ರಾ ಗೌಡ ಅರ್ಜಿ ವಜಾ
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್