Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK
KARNATAKA

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

By kannadanewsnow0906/03/2026 3:21 PM

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ ಎಂದಿದ್ದಾರೆ.

ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ ₹11,000 ಕೋಟಿಗೂ ಹೆಚ್ಚು ಹಣ ರಾಜ್ಯಕ್ಕೆ ಹರಿದುಬರುತ್ತದೆ. ಕೇಂದ್ರದಿಂದ ಹಣ ಬರುವುದು ಕಡಿಮೆ ಆಗಿಲ್ಲ ಎಂಬುದನ್ನು ಅವರ ಬಜೆಟ್ ಪುಸ್ತಕವೇ ಹೇಳುತ್ತದೆ!

ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು.

ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್. ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ! ಈ ಸಾಲ ₹1.16 ಲಕ್ಷ ಕೋಟಿಯಿಂದ ₹1.32 ಲಕ್ಷ ಕೋಟಿಗೆ ಏರಿದೆ!! ಮುಂದಿನ ವರ್ಷಕ್ಕೆ ₹9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ.

ಸಾಲ ಮಾಡುತ್ತಿದ್ದೀರಿ, ಸರಿ. ಅದನ್ನು ಏನಕ್ಕೆ ಬಳಕೆ ಮಾಡುತ್ತಿದ್ದೀರಿ? ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ? ದುರಂತವೆಂದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು ವರ್ಷಗಳಿಂದ ಅಲ್ಲೇ ಇದೆ. ಇವರು ಸಾಲ ಮಾಡಿ ಮೋಜು ಮಾಡುತ್ತಿದ್ದಾರೆ. ಸಾಲದ ಮೇಲೆ ಸಾಲ ಮಾಡಿ 140ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರಿಗೆ ಕ್ಯಾಬಿನೆಟ್ ದರ್ಜೆ, ಸ್ಟೇಟ್ ಮಿನಿಸ್ಟರ್ ದರ್ಜೆ ದಯಪಾಲಿಸಿ ಪೊಗದಸ್ತಾಗಿ ಸಾಕುತ್ತಿದ್ದಾರೆ. ಅನುತ್ಪಾದಕ ವೆಚ್ಚಕ್ಕೆ ಹಣ ಪೋಲಾಗುತ್ತಿದ್ದು, ಈ ಸರಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಿದೆ. ಸಾಲದ ದುಡ್ಡು ಅವರ ಕಿಸೆಗೆ ಹೋಗಿ ಸೇರುತ್ತಿದೆ. ವೋಟು ಕೊಟ್ಟ ಮಹಾಪಾಪಕ್ಕೆ ಜನತೆಯನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ಧಾರುಣ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.

ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು.

ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್…

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 6, 2026

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

ಸಿಎಂ ಸಿದ್ಧರಾಮಯ್ಯ ಮತ್ತೊಂದು ದಾಖಲೆ: ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್ ಮಂಡನೆ | Karnataka Budget 2026-27

Share. Facebook Twitter LinkedIn WhatsApp Email

Related Posts

Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM2 Mins Read

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM1 Min Read

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM1 Min Read
Recent News
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM
State News
Budget (2) KARNATAKA

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0506/03/2026 3:23 PM KARNATAKA 2 Mins Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ದಾಖಲೆಯ 2026-27ನೇ ಸಾಲಿನ ಬಜೆಟ್​ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಈ ಬಾರಿ…

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.