ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸಿಎಂ ಸಿದ್ದರಾಮಯ್ಯ ಭಯೋತ್ಪಾದಕ ಎಂದು ಕರೆದಿದ್ದರು. ಈ ಒಂದು ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹೋಗುವ ಕನಸು ಬಿದ್ದಿದೆ. ಹಾಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರು ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹತಾಶರಾಗಿರುವುದು ಸ್ಪಷ್ಟವಾಗಿ ಅರ್ಥವಾಗಿದೆ. ರಾಜಕಾರಣದಲ್ಲಿ ಅಧಿಕಾರ ಬರುತ್ತದೆ, ಹೋಗುತ್ತದೆ ಆದರೆ ಯಾವುದೇ ಕಾರಣಕ್ಕೂ ಹತಾಶರಾಗಬಾರದು. ಕೋರ್ಟ್ ಅವರನ್ನು ಸಿಕ್ಕಾಪಟ್ಟೆ ಜಾಡಿಸಿದೆ. ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಹೋಗುವ ಕನಸು ಬೀಳುತ್ತಿದೆ.ಅಧಿಕಾರ ಹೋಗುವ ಹತಾಶೆಯಿಂದ ಸಿಎಂ ಸಿದ್ದರಾಮಯ್ಯ ಈ ರೀತಿ ಮಾತನಾಡುತ್ತಿದ್ದಾರೆ.
ಅತ್ಯಂತ ಅಪ್ರಭುದ್ಧ ಹೇಳಿಕೆ ಕೊಡುತ್ತಿದ್ದಾರೆ. ನಾವು ಅವರನ್ನು ಟೀಕೆ ಮಾಡುತ್ತೇವೆ ಅವರು ನಮ್ಮನ್ನು ಟೀಕಿಸುತ್ತಾರೆ. ಅಧಿಕಾರ ಹೋಗುವ ಸ್ಥಿತಿ ಬಂದಿರುವುದರಿಂದ ಅವರು ಸ್ಥಿಮಿತ ಕಳೆದುಕೊಂಡಿದ್ದಾರೆ. ಮಾನಸಿಕ ಸೀಮಿತಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಒಳ್ಳೆಯದು. ಬಜರಂಗದಳ ಯಾವಾಗಲೂ ಪಾಕಿಸ್ತಾನ ಜಿಂದಾಬಾದ್ ಎಂದಿಲ್ಲ. ಹಳೆ ಹುಬ್ಬಳ್ಳಿ ಠಾಣೆ ಮೇಲಿನ ದಾಳಿಯ ಪ್ರಕರಣ ಹಿಂಪಡೆದಿದ್ದು ಯಾಕೆ ಎಂದು ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.