ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಚಿಕಿತ್ಸೆ ಪಡೆಯುವುದು ಉತ್ತಮ : ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸಿಎಂ ಸಿದ್ದರಾಮಯ್ಯ ಭಯೋತ್ಪಾದಕ ಎಂದು ಕರೆದಿದ್ದರು. ಈ ಒಂದು ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹೋಗುವ ಕನಸು ಬಿದ್ದಿದೆ. ಹಾಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರು ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹತಾಶರಾಗಿರುವುದು ಸ್ಪಷ್ಟವಾಗಿ ಅರ್ಥವಾಗಿದೆ. ರಾಜಕಾರಣದಲ್ಲಿ ಅಧಿಕಾರ ಬರುತ್ತದೆ, ಹೋಗುತ್ತದೆ ಆದರೆ ಯಾವುದೇ ಕಾರಣಕ್ಕೂ ಹತಾಶರಾಗಬಾರದು. … Continue reading ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಚಿಕಿತ್ಸೆ ಪಡೆಯುವುದು ಉತ್ತಮ : ಪ್ರಹ್ಲಾದ್ ಜೋಶಿ ತಿರುಗೇಟು