ಬೆಂಗಳೂರು: ಮೂರು ವರ್ಷಗಳಿಗೆ ಒಮ್ಮೆ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ 2 ಕೋಟಿ ಅನುದಾನ ಮಂಜೂರಿಗೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿಗೆ ಸಿಎಂ ಸಿದ್ದರಾಮಯ್ಯ ತಕ್ಷಣವೇ ಪ್ರತಿ ಸ್ಪಂದಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ ಪತ್ರ ನೀಡಿ ಮನವಿ ಮಾಡಿದ್ದರು. ಸಿಎಂಗೆ ನೀಡಿದ ಮನವಿ ಪತ್ರದಲ್ಲಿ ಸಾಗರದ ಮಾರಿಕಾಂಬ ದೇವಿ ಜಾತ್ರೆ ಮೂರು ವರ್ಷಗಳಿಗೆ ಒಮ್ಮೆ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಯ ಭಕ್ತರು ಆಗಮಿಸುತ್ತಾರೆ ಎಂದಿದ್ದರು.
9 ದಿನಗಳ ಕಾಲ ನಡೆಯುವಂತ ಸಾಗರದ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿ ಅಗಲಿದ್ದಾರೆ. ಹೀಗಾಗಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೊಂದು ವಿಶೇಷ ಆದ್ಯತೆ ಮೇರೆಗೆ ಪರಿಗಣಿಸಿ ಅನುದಾನ ಕಲ್ಪಿಸಲು ಮನವಿ ಮಾಡಿದ್ದರು.
ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಗೆ ಸ್ಥಳದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಪತ್ರದ ಮೇಲೆ ಸಹಿ ಮಾಡಿ ಎರಡು ಕೋಟಿ ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪ್ರಯತ್ನದಿಂದಾಗಿ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ 2 ಕೋಟಿ ಅನುದಾನ ಮಂಜೂರು ಆದಂತೆ ಆಗಿದೆ.
ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು…









