ಮೈಸೂರು : ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ನನ್ನನ್ನು ಸೋಲುತ್ತಾರೆ ಎಂದು ಜ್ಯೋತಿಷ್ಯ ಹೇಳಿದ್ದಾರೆ. ಉಳಿದವರ ಸೋಲು ಗೆಲುವಿನ ಬಗ್ಗೆಯೂ ಅವರನ್ನೇ ಕೇಳಿ ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.
ನಿನ್ನೆ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ನೂರಕ್ಕೆ ನೂರರಷ್ಟು ಗ್ಯಾರಂಟಿ ಇದೆ ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಸೋಲುತ್ತಾರೆ ಎಂದು ಹೇಳಿಕೆ ನೀಡಿದರು. ಈ ಹೇಳಿಕೆಗೆ ಇದೀಗ ಎಚ್ ಡಿ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
BIG NEWS : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ‘ಮುಜಾಮಿಲ್ ಪಾಷಾ’ 7 ದಿನ ‘NIA’ ವಶಕ್ಕೆ
ಪಟ್ಟಣದ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಗುರುವಾರ ಭೇಟಿ ನೀಡಿ ತುಲಾಭಾರ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಜ್ಯೋತಿಷಿಯಾಗಿದ್ದಾರೆ. ಯಾರ್ ಯಾರು ಗೆಲ್ಲುತ್ತಾರೆ, ಸೋಲುತ್ತಾರೆ ಎಂಬುದನ್ನು ಸಿದ್ದರಾಮಯ್ಯ ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರೆ ಎಂದು ಲೇವಡಿ ಮಾಡಿದರು.
ಪೋಷಕರೊಂದಿಗೆ ವಾಸಿಸಲು ಪ್ರತಿ ತಿಂಗಳು 40,000 ರೂ.ಗಳ ‘ಬಾಡಿಗೆ’ ಪಾವತಿಸಿದ ಯುಕೆ ವ್ಯಕ್ತಿ
ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಸೋಲುತ್ತಾರೆಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿ ನನ್ನ ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು. ಜೆಡಿಎಸ್ ಕೋಮುವಾದಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಸಿದ್ದರಾಮಯ್ಯ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ. ಮೇಕೆದಾಟು ವಿಚಾರದಲ್ಲಿ ದೇವೇಗೌಡರನ್ನ ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ ನವರಿಗೆ ಇಲ್ಲ ಎಂದರು.