Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿಜಾಂ ಉಚ್ಚಾಟನೆ!

BREAKING : ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ಹೃದಯಾಘಾತದಿಂದ ನಿಧನ!

BREAKING : ಮಂಡ್ಯದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ
KARNATAKA

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ವಿದ್ಯುಕ್ತ ಚಾಲನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು.

ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು.

ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನೆರವಾಗಲಿ ಎಂದರು.

ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮ ಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರ ಮಾಧ್ಯಮ‌ ನೆರವಾಗಬೇಕು ಎಂದರು.

ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮ ಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ನೆರವಾಗುತ್ತದೆ ಎಂದರು.

ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ದವಾಗಿದೆ ಎಂದರು.

ಪ್ರಕಾಶ್ ರಾಜ್ ಸಿನಿಮಾಗೆ ಸೀಮಿತವಾಗಿಲ್ಲ

ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ದತೆ ಅಭಿನಂದನೀಯ ಎಂದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬಹುಭಾಷಾ ನಟ ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ವಿಧಾನ‌ ಪರಿಷತ್ ಸದಸ್ಯೆ ನಟಿ ಉಮಾಶ್ರೀ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಸೇರಿ ಹಲವರು ಉಪಸ್ಥಿತರಿದ್ದರು.

BREAKING: ಆನ್ ಲೈನ್ ಬೆಟ್ಟಿಂಗ್ ಕೇಸ್: EDಯಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಸಚಿವರ ಸೂಚನೆಗೆ ಡೋಂಟ್ ಕೇರ್: ಸಾಗರದ ತಾಳಗುಪ್ಪ ಗ್ರಾಮ ಪಂಚಾಯ್ತಿ ವಾಣಿಜ್ಯ ಮಳಿಗೆ ಟೆಂಡರ್, PDO ಸಸ್ಪೆಂಡ್?

Share. Facebook Twitter LinkedIn WhatsApp Email

Related Posts

BIG NEWS : ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿಜಾಂ ಉಚ್ಚಾಟನೆ!

2 Mins Read

BREAKING : ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ಹೃದಯಾಘಾತದಿಂದ ನಿಧನ!

2 Mins Read

BREAKING : ಮಂಡ್ಯದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

1 Min Read
Recent News

BIG NEWS : ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿಜಾಂ ಉಚ್ಚಾಟನೆ!

BREAKING : ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ಹೃದಯಾಘಾತದಿಂದ ನಿಧನ!

BREAKING : ಮಂಡ್ಯದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

ನಾನೇನು ಹರಿದಿಲ್ಲ ಎಂದ ಮೇಲೆ, ನನ್ನ ಬಳಿ ಏನು ಸಲಹೆ ಕೇಳುತ್ತಾರೆ? : ಸಿಎಂ ಡಿಕೆಶಿ ಭೇಟಿಗೆ HD ಕುಮಾರಸ್ವಾಮಿ ವ್ಯಂಗ್ಯ

State News
KARNATAKA

BIG NEWS : ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಕೇಸ್ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಿಜಾಂ ಉಚ್ಚಾಟನೆ!

By ಸುರೇಶ್‌ KARNATAKA 2 Mins Read

ಮಂಗಳೂರಿನಲ್ಲಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 2.77 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ದೊಡ್ಡ ರಾಜಕೀಯ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ…

BREAKING : ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ಹೃದಯಾಘಾತದಿಂದ ನಿಧನ!

BREAKING : ಮಂಡ್ಯದಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

ನಾನೇನು ಹರಿದಿಲ್ಲ ಎಂದ ಮೇಲೆ, ನನ್ನ ಬಳಿ ಏನು ಸಲಹೆ ಕೇಳುತ್ತಾರೆ? : ಸಿಎಂ ಡಿಕೆಶಿ ಭೇಟಿಗೆ HD ಕುಮಾರಸ್ವಾಮಿ ವ್ಯಂಗ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.