Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಖಾಲಿ ಇರುವ ‘ಬ್ಯಾಕ್’ ಲಾಗ್’ ಹುದ್ದೆಗಳ ಭರ್ತಿ ಗೆ ‘CM ಸಿದ್ದರಾಮಯ್ಯ’ ಸೂಚನೆ.!
KARNATAKA

ರಾಜ್ಯದಲ್ಲಿ ಖಾಲಿ ಇರುವ ‘ಬ್ಯಾಕ್’ ಲಾಗ್’ ಹುದ್ದೆಗಳ ಭರ್ತಿ ಗೆ ‘CM ಸಿದ್ದರಾಮಯ್ಯ’ ಸೂಚನೆ.!

By kannadanewsnow5726/08/2025 5:57 AM

ಬೆಂಗಳೂರು : ಬಾಕಿಯಿರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. 

• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು.

“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

• ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.

• ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು.

• 2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6,635 ಪ್ರಕರಣಗಳು ದಾಖಲಾಗಿವೆ. 4912 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4,149 ಪ್ರಕರಣಗಳಲ್ಲಿ ಮಾತ್ರ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.

• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ  ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಬೇಕು.

• ರಾಜ್ಯದಲ್ಲಿ 33 ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.

• ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್ಐಆರ್ ದಾಖಲಿಸಬೇಕು.

• ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

•ಬಾಕಿಯಿರುವ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

CM Siddaramaiah instructs to fill vacant 'backlog' posts in the state!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM2 Mins Read

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM1 Min Read

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM1 Min Read
Recent News

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM
State News
KARNATAKA

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

By kannadanewsnow5720/03/2026 4:45 AM KARNATAKA 2 Mins Read

ಬೆಂಗಳೂರು : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ…

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.