Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM

ಎಜಿಆರ್, ಆದಾಯದಲ್ಲಿ ಶೇ 43ರಷ್ಟು ಪಾಲಿನೊಂದಿಗೆ ಬಲವಾದ ಬೆಳವಣಿಗೆಯೊಂದಿಗೆ ಜಿಯೋ ಮುಂಚೂಣಿಯಲ್ಲಿ

26/02/2026 5:43 PM

ಅಡುಗೆ ಮನೆಯ ‘ಶುಂಠಿ’ ಕೇವಲ ಸಾಂಬಾರ ಪದಾರ್ಥವಲ್ಲ, ಇದು ಸರ್ವರೋಗ ನಿವಾರಕ! | Ginger Health Benefits

26/02/2026 5:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸಿದ್ಧರಾಮಯ್ಯ ಸೂಚನೆ
KARNATAKA

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸಿದ್ಧರಾಮಯ್ಯ ಸೂಚನೆ

By kannadanewsnow0913/11/2025 8:56 PM

ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು.

ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.‌

ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತೆ ಯಾವ ಸ್ವರೂಪದ ಸಂಘರ್ಷ ಇದೇ ಎಂದು ಪಟ್ಟಿ ಮಾಡುವುದು.

ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ.

*ಗಸ್ತು: ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ .

*ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಮಾಡುವುದು.

*ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ , ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳುವುದು.

ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡುವುದು.

ಅಣಕು ಪ್ರದರ್ಶನ:
ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು.

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ
ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು*

ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸುವುದು

ಸಭೆಯಲ್ಲಿ ಚರ್ಚೆಗೆ ಬಂದ ಇತರೆ ಪ್ರಮುಖ ಸಂಗತಿಗಳು…

ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6395 ಇದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಹಾಗೂ 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ವನ್ಯಜೀವಿ ಹಾವಳಿಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2022-23ರಲ್ಲಿ 57, 2023-24ರಲ್ಲಿ 65, 2024-25ರಲ್ಲಿ 46, 2025-26ರಲ್ಲಿ 32 ಮಾನವ ಜೀವ ಹಾನಿ ಸಂಭವಿಸಿದೆ.

ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25 ರಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ 30% ಕಡಿತವಾಗಿದೆ.

ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆದ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳ ಮೇವಿಗೆ ಕೊರತೆ ಉಂಟಾಗುತ್ತದೆ.

ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

KSRTC ಅಧಿಕಾರಿ, ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

2 ದಶಕದಲ್ಲಿ ಜಗತ್ತಿನಾದ್ಯಂತ 1600 ಪತ್ರಕರ್ತರ ಹತ್ಯೆಗೆ KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆತಂಕ

Share. Facebook Twitter LinkedIn WhatsApp Email

Related Posts

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM1 Min Read

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ ಗೆ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ಬಾಲಕಿಯ ಪೋಷಕರು

26/02/2026 5:22 PM1 Min Read

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ

26/02/2026 5:09 PM1 Min Read
Recent News

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM

ಎಜಿಆರ್, ಆದಾಯದಲ್ಲಿ ಶೇ 43ರಷ್ಟು ಪಾಲಿನೊಂದಿಗೆ ಬಲವಾದ ಬೆಳವಣಿಗೆಯೊಂದಿಗೆ ಜಿಯೋ ಮುಂಚೂಣಿಯಲ್ಲಿ

26/02/2026 5:43 PM

ಅಡುಗೆ ಮನೆಯ ‘ಶುಂಠಿ’ ಕೇವಲ ಸಾಂಬಾರ ಪದಾರ್ಥವಲ್ಲ, ಇದು ಸರ್ವರೋಗ ನಿವಾರಕ! | Ginger Health Benefits

26/02/2026 5:35 PM

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 2,551 ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

26/02/2026 5:32 PM
State News
KARNATAKA

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

By kannadanewsnow0926/02/2026 5:47 PM KARNATAKA 1 Min Read

ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ…

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ ಗೆ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ಬಾಲಕಿಯ ಪೋಷಕರು

26/02/2026 5:22 PM

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ

26/02/2026 5:09 PM

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ: ಶಾಸಕರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ್ ಖಂಡ್ರೆ

26/02/2026 5:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.