ಚಾಮರಾಜನಗರ : ಸಿದ್ದರಾಮಯ್ಯ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿತು ಅಲ್ಲದೆ ಇದ್ದ ರಾಜ್ಯದಲ್ಲಿ ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು ಆದರೆ ಸಿಎಂ ಸಿದ್ದರಾಮಯ್ಯ ಇಂದು ಸದ್ಯಕ್ಕೆ ಸಚಿವ ಸಂಪುಟ ಪುನಾರಕ್ಷಣಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಇದು ವೇಳೆ ಶಾಸಕ ಕೆ ಎನ್ ರಾಜಣ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ ಅಂತ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ನಾನು ಮಂತ್ರಿ ಆಗುತ್ತೇನೋ ಇಲ್ಲವೋ ಅನ್ನೋದು ಗೊತ್ತಿಲ್ಲ. ಆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಜೆಡಿಎಸ್ ಗೆ ದೇವೇಗೌಡರು ಹಾಗೂ ಅವರ ಮಕ್ಕಳು ಹೇಗೆ ಮುಖ್ಯವೋ ಅದೇ ರೀತಿ ಬಿಜೆಪಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಗೆ ಮುಖ್ಯವೊ, ಹಾಗೆಯೇ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಹಾಗಾಗಿ ಈ ವೇಳೆ ಬದಲಾವಣೆ ಮಾತು ಏಕೆ? ಎಂದು ಶಾಸಕ ಕೆಎನ್ ರಾಜಣ್ಣ ಹೇಳಿಕೆ ನೀಡಿದರು.








