ಬೆಂಗಳೂರು : ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಆ್ಯಂಬುಲೆನ್ಸ್ಗಳ ಸೇವೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಆ್ಯಂಬುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ.
ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಆ್ಯಂಬುಲೆನ್ಸ್ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿದ್ದು, ಅಂತಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಆ್ಯಂಬುಲೆನ್ಸ್ಗಳನ್ನು ನೀಡಲಾಗಿದೆ.
* ಆ್ಯಂಬುಲೆನ್ಸ್ಗಳು ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಸನಿಹದ ಆಸ್ಪತ್ರೆಗಳಲ್ಲಿ ತಂಗಲಿವೆ.
* 65 ಹಾಟ್ಸ್ಪಾಟ್ಗಳನ್ನು ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್ಗಳನ್ನು ನೀಡಲಾಗಿದೆ.
* ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ (ALS) ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದೆ.
* ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ಚಿಕಿತ್ಸೆ ಅಗತ್ಯವಾದಲ್ಲಿ ಆರೋಗ್ಯ ಇಲಾಖೆಯ ಸ್ಟಾಫ್ ನರ್ಸ್ಗಳನ್ನು ಆ್ಯಂಬುಲೆನ್ಸ್ಗಳಿಗೆ ಡೆಪ್ಯೂಟ್ ಮಾಡಲಾಗುವುದು.
* ವೆಂಟಿಲೇಟರ್ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗಳಿಗೆ ರೋಗಿಗಳನ್ನು ಕರೆದೊಯ್ದು ಚಿಕಿತ್ಸೆ ಕೊಡಿಸುವ ಸೌಲಭ್ಯ ಒದಗಿಸಲಾಗಿದೆ.
* ಆ್ಯಂಬುಲೆನ್ಸ್ಗಳು ಸುಸಜ್ಜಿತ ಉಪಕರಣಗಳು ಮತ್ತು ಔಷಧಿ ಹಾಗೂ ಉಪಭೋಗ್ಯ ವಸ್ತುಗಳನ್ನು ಹೊಂದಿರಲಿವೆ. ಇವು ಅಪಘಾತಕ್ಕೆ ಒಳಗಾದ ವ್ಯಕ್ತಿಯ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ.
* ಆ್ಯಂಬುಲೆನ್ಸ್ ಸೇವೆ ಸಂಪೂರ್ಣ ಉಚಿತ