Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ಜನರ ಮನೆ ಬಳಿಗೆ ‘ಆರೋಗ್ಯ ಸೇವೆ’ ಒದಗಿಸುವ ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ
KARNATAKA

Good News: ಜನರ ಮನೆ ಬಳಿಗೆ ‘ಆರೋಗ್ಯ ಸೇವೆ’ ಒದಗಿಸುವ ‘ಗೃಹ ಆರೋಗ್ಯ ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ ದೊರೆತಿದೆ. ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೀಟ್ ಹಾಲ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಯೋಜನೆ ಪ್ರಾರಂಭಿಸಲಾಗಿದ್ದು, ಸಾಂಕೇತಿಕವಾಗಿ ನಾಲ್ವರಿಗೆ ಔಷಧಿಗಳನ್ನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಆರೋಗ್ಯ ಯೋಜನೆಯ ರೂವಾರಿ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೊಂದು ದೂರದೃಷ್ಟಿಯ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರ ಜೀವ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು. ರಾಜ್ಯದಲ್ಲಿ ಶೇಕಡಾ 26.9% ರಷ್ಟು ರಕ್ತದೊತ್ತಡ, ಶೇಕಡಾ 15.6% ರಷ್ಟು ಮಧುಮೇಹ ರೋಗಗಳಿಂದ ಜನರು ಬಳಲುತ್ತಿದ್ದು, ಇದರಿಂದ‌ ಉಂಟುಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನ ತಡೆಗಟ್ಟವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ.

ಅಲ್ಲದೇ ರಾಜ್ಯದಲ್ಲಿ ಶೇಕಡಾ 11.5 % ರಷ್ಟು ಬಾಯಿ ಕ್ಯಾನ್ಸರ್; ಶೇಕಡಾ 26 % ರಷ್ಟು ಸ್ತನ ಕ್ಯಾನ್ಸರ್ ಹಾಗೂ ಶೇಕಡಾ 18.3 % ರಷ್ಟು ಗರ್ಭಕಂಠದ ಕ್ಯಾನ್ಸರ್ ರೋಗಗಳಿಂದ ಜನರು ತತ್ತರಿಸುತ್ತಿದ್ದು, ಈ ರೋಗಗಳಿಗೂ ಪರಿಹಾರ ಒದಗಿಸಲು ಗೃಹ ಆರೋಗ್ಯ ಯೋಜನೆಯಲ್ಲಿ ರೂಪ ರೇಷೆಗಳನ್ನ ಸಿದ್ಧಪಡಿಸಲಾಗಿದೆ. ಯೋಜನೆಯ ಮುಖಾಂತರ ಜನರನ್ನ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಿ ಔಷಧಿಗಳನ್ನ ಪೂರೈಸುವುದಷ್ಟೇ ಅಲ್ಲ. ದೀರ್ಘಾವಧಿಯಲ್ಲಿ ಈ ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಕಿಡ್ನಿ ವೈಫಲ್ಯ, ಹೃದಯಾಘಾತ, ಸ್ಟ್ರೋಕ್ ಗಳಂತಹ ಜೀವಪಾಯ ರೋಗಗಳಿಂದ ಜನರನ್ನ ರಕ್ಷಿಸಬಹುದಾಗಿದೆ. ಹೀಗಾಗಿ ಗೃಹ ಆರೋಗ್ಯ ಯೋಜನೆ ನಮ್ಮ ಜನರ ಜೀವ ರಕ್ಷಣೆಯಲ್ಲಿ ಪ್ರಮುಖವಾಗಿದ್ದು, ದೇಶದಲ್ಲೇ ಈ ರೀತಿಯ ದೂರದೃಷ್ಟಿಯ ಯೋಜನೆಯನ್ನ ಜಾರಿಗೊಳಿಸುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕೋಲಾರ ಜಿಲ್ಲೆಯಿಂದ ಯೋಜನೆಯನ್ನ ಪ್ರಾರಂಭಿಸಲಾಗುತ್ತಿದ್ದು, ಎರಡು ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಚಾಲ್ತಿಗೆ ಬರಲಿದೆ. ಯೋಜನೆಯನ್ನ ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಣ ತೊಟ್ಟಿದ್ದಾರೆ. ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶದ ಜನರು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ನಿರ್ಲಕ್ಷ್ಯೆ ವಹಿಸುತ್ತಿದ್ದಾರೆ. ಇದೀಗ ಆರೋಗ್ಯ ಇಲಾಖೆಯನ್ನೇ ಜನರ ಬಳಿಗೆ ಕಳಿಸುತ್ತಿದ್ದು, ನಮ್ಮ ಜನರು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೃಹ ಆರೋಗ್ಯ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ದೇಶದಲ್ಲಿ ಶೇ 25 ರಷ್ಟು ರಕ್ತದೊತ್ತಡ ಹಾಗೂ ಶೇ 15.6 ರಷ್ಟು ಮಧುಮೇಹದಿಂದ ಜನರು ಬಲಳುತ್ತಿದ್ದಾರೆ. ಈ ಸಂಖ್ಯೆ ಹೆಚ್ಚು ಇರಬಹುದು. ಏಕೆಂದರೆ ಬಹುತೇಕ ನಮ್ಮ ಗ್ರಾಮೀಣ ಭಾಗದ ಜನರು ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಆರೋಗ್ಯ ಇಲಾಖೆ ಮನೆಗಳಿಗೆ ತೆರಳಿ ಜನರ ಅಸಾಂಕ್ರಾಮಿಕ ರೋಗಗಳ ತಪಾಸಣೆ ನೆಡೆಸುವುದರ ಜೊತೆಗೆ ಮನೆ ಬಳಿಗೆ ಉಚಿತವಾಗಿ ಔಷಧಿಗಳನ್ನ ಪೂರೈಸಲು ಸಜ್ಜಾಗಿದೆ. ನಮ್ಮ ಜನರು ವೈದ್ಯರ ಸಲಹೆಗಳಂತೆ ನಡೆದುಕೊಳ್ಳಬೇಕು ಎಂದರು.

ಹಳ್ಳಿಗಾಡಿನ ಜನರು ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ವಿಚಾರದಲ್ಲಿ ನಿರ್ಲೆಕ್ಷ್ಯೆ ವಹಿಸುತ್ತಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆಯನ್ನ ಜನರ ಮನೆ ಬಳಿಗೆ ಕಳಿಸಿ ತಪಾಸಣೆ ನಡೆಸಿ, ಔಷಧಿ ಪೂರೈಸುವ ಯೋಜನೆ ರೂಪಿಸಿದೆ. ಇದು ಒಂದು ಉತ್ತಮ ಯೋಜನೆಯಾಗಿದ್ದು, ರಾಜ್ಯಾದ್ಯಂತ ಯೋಜನೆ ಜಾರಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಇದೇ ವೇಳೆ ಸಿಎಙ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಗೃಹ ಆರೋಗ್ಯ ಯೋಜನೆಯ ಕಾರ್ಯಚಟುವಟಿಕೆ

ಕೋಲಾರ ಜಿಲ್ಲೆಯಿಂದ ಯೋಜನೆ ಪ್ರಾರಂಭ ಮುಂಬರುವ ಜನವರಿ ತಿಂಗಳಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆ ಜಾರಿ.

* ರಕ್ತದೊತ್ತಡ, ಮಧುಮೇಹ ಮತ್ತು ಬಾಯಿ, ಗರ್ಭ ಕಂಠ ಮತ್ತು ಸ್ತನ ಕ್ಯಾನ್ಸರ್ ಸ್ಕ್ರೀನಿಂಗ್‌, BMI, ವೇಸ್ಟ್‌ ಹಿಪ್‌ ರೇಷ್ಯೋ ಅನುಪಾತ, ಸ್ಲೀಪ್ ಅಪ್ನಿಯಾ (ನಿದ್ದೆಯಲ್ಲಿ ಉಸಿರುಗಟ್ಟುವಿಕೆ) ಮತ್ತು ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ತಪಾಸಣೆ ನಡೆಸಲಾಗುತ್ತದೆ.

* ಆರೋಗ್ಯ ಕಾರ್ಯಕರ್ತರ ತಂಡವು ದಿನಕ್ಕೆ 15 ಮನೆಗಳ ತಪಾಸಣೆ ನಡೆಸಲಿದೆ. ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ಈ ತಂಡ ಮನೆ ಮನೆಗಳಿಗೆ ಭೇಟಿ ನೀಡುತ್ತದೆ.

* ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆ ಪೆಟ್ಟಿಗೆ ನೀಡಲಾಗುವುದು. ಕೆಲವರಿಗೆ ಜೀವನಶೈಲಿ ಮಾರ್ಪಡಿಗೆ (ಆಹಾರ, ವ್ಯಾಯಾಮ) ಸಲಹೆ ನೀಡಲಾಗುವುದು. ಎರಡು ತಿಂಗಳ ನಂತರ ತಪಾಸಣೆ ಮಾಡಿ ದೃಢಪಟ್ಟಲ್ಲಿ ಅಂಥವರಿಗೆ ಔಷಧೋಪಚಾರಗಳನ್ನು ನೀಡಲಾಗುವುದು.

* ಆರೈಕೆಯಲ್ಲಿರುವ ರೋಗಿಗಳಿಗೆ, ವಿಶೇಷ ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಅಸಾಂಕ್ರಾಮಿಕ ರೋಗಿಗಳು ಇದ್ದಲ್ಲಿ ಔಷಧೋಪಚಾರಗಳನ್ನು ನೀಡಲಾಗುವುದು. (ಉಚಿತವಾಗಿ ಮಾತ್ರೆ ಪೆಟ್ಟಿಗೆಯಲ್ಲಿ ಔಷಧಿ ನೀಡಲಾಗುತ್ತದೆ)

* ಅಂದಾಜು 4 – 6 ತಿಂಗಳುಗಳಲ್ಲಿ ಸ್ಕ್ರೀನಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಹೆಚ್ಚಿನ ಆರೈಕೆಗಾಗಿ ಒಂದು ತಿಂಗಳ ನಂತರ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ.

ಎರಡನೇ ಹಂತದಲ್ಲಿ, ಎನ್‌.ಸಿ.ಡಿ.ಗಳ ಅನುಸರಣೆ (ಫಾಲೋ ಅಪ್‌) ಮತ್ತು ನಿಯಂತ್ರಣಕ್ಕೆ ಗಮನ ನೀಡಲಾಗುತ್ತದೆ. ಈ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಾಸಿಕ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತದೆ.

* “ಗೃಹ ಆರೋಗ್ಯ” ಯೋಜನೆಯು ಅಕಾಲಿಕ ಮರಣಗಳನ್ನು ತಡೆಗಟ್ಟಲು, ಸಾಂಕ್ರಾಮಿಕವಲ್ಲದ ರೋಗಗಳ ಚಿಕಿತ್ಸೆಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಅಗತ್ಯ ಆರೋಗ್ಯ ಸೇವೆ ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ.

BREAKING: ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅಪರಾಧಿ – ಕೋರ್ಟ್ ತೀರ್ಪು

ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ

Share. Facebook Twitter LinkedIn WhatsApp Email

Related Posts

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

2 Mins Read

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

2 Mins Read
Recent News

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

State News
KARNATAKA

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ. ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಅಂಕ ತೆಗೆದವರಿಗೆ ವಿಶೇಷ ಬಹುಮಾನ ನೀಡುವುದಾಗಿ…

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.