ಬೆಂಗಳೂರು: ಇಂದಿನಿಂದ ಮುಡಾ ಹಗರಣ ಕುರಿತಂತೆ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ ಕೋರಿ ಬಿಜೆಪಿ-ಜೆಡಿಎಸ್ ಸದನದಲ್ಲಿ ಅಹೋರಾತ್ರಿ ಧರಣಿಗೆ ನಿರ್ಧರಿಸಿದೆ. ಈ ಬೆನ್ನಲ್ಲೇ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಅವರೊಂದಿಗೆ ರಾಜ್ಯದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ ಹಾಗೂ ವಾಲ್ಮೀಕಿ, ಮುಡಾ ಹಗರಣದ ಬಗ್ಗೆ ವರದಿಯನ್ನು ನೀಡಲಿದ್ದಾರೆ ಎನ್ನಲಾಗುತ್ತಿದೆ.
ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ. ಅವರೊಂದಿಗೆ ಪ್ರಸ್ತುತ ವಿದ್ಯಮಾನಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದಲ್ಲದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣದ ಬಗ್ಗೆಯೂ ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ವರದಿಯನ್ನು ನೀಡುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಪಾಲರ ಭೇಟಿಯ ಬಗ್ಗೆ ಭೇಟಿಯ ಬಳಿಕ ಸಿದ್ಧರಾಮಯ್ಯ ಮಾಹಿತಿ ನೀಡಿದಾಗಲೇ ಯಾವುದಕ್ಕೆ ಭೇಟಿ ಎನ್ನುವುದು ಖಚಿತವಾಗಲಿದೆ.
ಬೆಂಗಳೂರಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರಿಗೆ ‘BBMP’ ಶಾಕ್: ‘142 FIR’ ದಾಖಲು
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ