BREAKING: ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿರುವಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ಸಲ್ಲಿಸಿದ್ದಾರೆ. ದಿಢೀರ್ ಬೆಳವಣಿಗೆ ಎನ್ನುವಂತೆ ಕಾಂಗ್ರೆಸ್ ಹೈಕಮಾಂಡ್ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು. ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ನೀಡಿದ್ದಂತ ಹೇಳಿಕೆ ಹಿನ್ನಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು … Continue reading BREAKING: ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ