ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ಚಾಲನೆ ನೀಡಿದರು. ಇಂದಿನಿಂದಲೇ ಅರ್ಹ ಅಭ್ಯರ್ಥಿಗಳ ಖಾತೆಗೆ ಯುವನಿಧಿ ಯೋಜನೆಯ ( Yuvanidhi Scheme ) ಹಣ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ.
ಕಳೆದ ಡಿಸೆಂಬರ್ 26ರಂದು ಸಿಎಂ ‘ಯುವನಿಧಿ’ ಯೋಜನೆಯ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿದ್ದರು. ಪದವಿ, ಡಿಪ್ಲೊಮಾ ಶಿಕ್ಷಣ ಪಡೆದು 6 ತಿಂಗಳಿನಿಂದ ಉದ್ಯೋಗ ದೊರೆಯದಿದ್ದರೆ, ಗರಿಷ್ಠ 2 ವರ್ಷದವರೆಗೆ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ‘ಯುವನಿಧಿ’ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಅಭ್ಯರ್ಥಿಯ ಬ್ಯಾಂಕ್ ಪಾಸ್‍ಪುಸ್ತಕ, ಇತ್ಯಾದಿ ದಾಖಲಾತಿಗಳೊಂದಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
ರಾಮ ಮಂದಿರ ‘ಪ್ರಾಣ’ ಪ್ರತಿಷ್ಠಾಪನೆ: 11 ದಿನಗಳ ವಿಶೇಷ ಸಂದೇಶ ಬಿಡುಗಡೆ ಮಾಡಿದ ‘ಪ್ರಧಾನಿ ಮೋದಿ’