Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಕ್ಕೆ ಸುಬ್ರಹ್ಮಣ್ಯದ 4 ಪ್ರವೇಶದಲ್ಲಿ, ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ : ಸಚಿವ ಈಶ್ವರ ಖಂಡ್ರೆ

BREAKING : ʻಕಾಂತಾರʼ ದೈವಕ್ಕೆ ಅಪಮಾನ : ಕೊನೆಗೂ ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ!

BIG NEWS : ಸಭೆಗೂ ಮುನ್ನ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮುಖಾಮುಖಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ರಾಜ್ಯದಲ್ಲಿನ ‘ಅನರ್ಹರ BPL ಕಾರ್ಡ್ ರದ್ದು’ಗೊಳಿಸುವಂತೆ ‘ಸಿಎಂ ಸಿದ್ಧರಾಮಯ್ಯ’ ಆದೇಶ
KARNATAKA

BREAKING NEWS: ರಾಜ್ಯದಲ್ಲಿನ ‘ಅನರ್ಹರ BPL ಕಾರ್ಡ್ ರದ್ದು’ಗೊಳಿಸುವಂತೆ ‘ಸಿಎಂ ಸಿದ್ಧರಾಮಯ್ಯ’ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು.

ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಈ ಸಂದರ್ಭದಲ್ಲಿ  ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದರು.

ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದರು.

ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು. ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಹೇಳಿದರು.

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.

ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಆಹಾರ ಇಲಾಖೆ ಅಧಿಕಾರಗಳ ಸಭೆಯ ಪ್ರಮುಖ ಹೈಲೈಟ್ಸ್

ಅತಿವೃಷ್ಠಿಯಿಂದ ಬೆಳಹಾನಿಗೊಂಡಿದ್ದ ರೈತರಿಗೆ ಗುಡ್ ನ್ಯೂಸ್: ನಿಮ್ಮ ಖಾತೆಗೆ ಪರಿಹಾರದ ಹಣ ಜಮಾ

Share. Facebook Twitter LinkedIn WhatsApp Email

Related Posts

ಕುಕ್ಕೆ ಸುಬ್ರಹ್ಮಣ್ಯದ 4 ಪ್ರವೇಶದಲ್ಲಿ, ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ : ಸಚಿವ ಈಶ್ವರ ಖಂಡ್ರೆ

2 Mins Read

BREAKING : ʻಕಾಂತಾರʼ ದೈವಕ್ಕೆ ಅಪಮಾನ : ಕೊನೆಗೂ ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ!

2 Mins Read

BIG NEWS : ಸಭೆಗೂ ಮುನ್ನ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮುಖಾಮುಖಿ!

2 Mins Read
Recent News

ಕುಕ್ಕೆ ಸುಬ್ರಹ್ಮಣ್ಯದ 4 ಪ್ರವೇಶದಲ್ಲಿ, ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ : ಸಚಿವ ಈಶ್ವರ ಖಂಡ್ರೆ

BREAKING : ʻಕಾಂತಾರʼ ದೈವಕ್ಕೆ ಅಪಮಾನ : ಕೊನೆಗೂ ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ!

BIG NEWS : ಸಭೆಗೂ ಮುನ್ನ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮುಖಾಮುಖಿ!

ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜೂನ್ 1ಕ್ಕೆ ಮುಂದೂಡಿದ ಹೈಕೋರ್ಟ್

State News
KARNATAKA

ಕುಕ್ಕೆ ಸುಬ್ರಹ್ಮಣ್ಯದ 4 ಪ್ರವೇಶದಲ್ಲಿ, ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ : ಸಚಿವ ಈಶ್ವರ ಖಂಡ್ರೆ

By ಸುರೇಶ್‌ KARNATAKA 2 Mins Read

ಕುಕ್ಕೆ ಸುಬ್ರಹ್ಮಣ್ಯ, ಮೇ 26: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ…

BREAKING : ʻಕಾಂತಾರʼ ದೈವಕ್ಕೆ ಅಪಮಾನ : ಕೊನೆಗೂ ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ!

BIG NEWS : ಸಭೆಗೂ ಮುನ್ನ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮುಖಾಮುಖಿ!

ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜೂನ್ 1ಕ್ಕೆ ಮುಂದೂಡಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.