ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಸಿಲಾಗಿದೆ. ಇನ್ನೂ ಬಾಕಿ ಉಳಿದಂತ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡುವುದಕ್ಕೆ ಸಮಿತಿ ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೇ ನಿರ್ದೇಶಕರು, ಸದಸ್ಯರುಗಳನ್ನು ನೇಮಿಸಬೇಕಾಗಿರುತ್ತದೆ ಅಂತ ತಿಳಿಸಿದ್ದಾರೆ.
ಆದ್ದರಿಂದ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡಲು ಈ ಕೆಳಕಂಡ ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ.
ಅಂದಹಾಗೇ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರುಗಳನ್ನು ಆಯ್ಕೆ ಮಾಡುವಂತ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ವಿಧಾನಸಭಾ ಸದಸ್ಯರಾದಂತ ಡಾ.ರೂಪಕಲಾ ಎಂ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ವಿಆರ್ ಸುದರ್ಶನ್, ಮಾಜಿ ಎಂಎಲ್ಸಿ ಕೆ.ಹರೀಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ
ಶಿವಮೊಗ್ಗ: ಜುಲೈ.11ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut