ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೆಲ ವಿಶ್ವ ವಿದ್ಯಾಲಯಗಳಿಗೆ ಕೃಷ್ಣದೇವರಾಯ, ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಗಣ್ಯರ ಹೆಸರಿಡಲಾಗಿದೆ. ಬಾಕಿ ಇರುವಂತ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಹೆಸರಿಡಲು ಅಗತ್ಯ ಕ್ರಮವಹಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅವರು,ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ ಎಂದಿದ್ದಾರೆ.
ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಪರಿಶೀಲಿಸಿ, ಸೂಕ್ತ ಪುಸ್ತಾವನೆಯನ್ನು ಮುಂದಿನ ಸಚಿವ ಸಂಪುಟದ ಮುಂದೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ನವೆಂಬರ್ ಕ್ರಾಂತಿಯ ಚರ್ಚೆ ಬೆನ್ನಲ್ಲೇ ತ್ಯಾಗದ ಮಾತು ಆಡಿದ ಡಿಸಿಎಂ ಡಿಕೆಶಿ
 
		



 




