ಬೆಂಗಳೂರು: ವಿಮಾನದ ಪ್ರಯಾಣದ ವೇಳೆಯಲ್ಲಿ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ಅದೇ ವಿಮಾನದಲ್ಲಿದ್ದಂತ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಸಿಪಿಆರ್ ನೀಡಿ, ಬದುಕಿಸುವಲ್ಲಿ ಯಶಸ್ವಿಯಾಗಿದ್ದರು. ಅವರ ಸೇವಾ ಮನೋಭಾವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ ಎಂದಿದ್ದಾರೆ.
ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ… pic.twitter.com/mXicw43NOg
— Siddaramaiah (@siddaramaiah) December 14, 2025








