Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ‘ನಕ್ಸಲ್ ಶರಣಾಗತಿ ನೀತಿ’ ಸರಳೀಕರಣ, ಮುಖ್ಯವಾಹಿನಿಗೆ ತರಲು ಬದ್ಧ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BREAKING: ರಾಜ್ಯದಲ್ಲಿ ‘ನಕ್ಸಲ್ ಶರಣಾಗತಿ ನೀತಿ’ ಸರಳೀಕರಣ, ಮುಖ್ಯವಾಹಿನಿಗೆ ತರಲು ಬದ್ಧ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0930/12/2024 7:59 PM

ಬೆಂಗಳೂರು: ಕರ್ನಾಟಕದಲ್ಲಿ ನಕ್ಸಲೀಯರು ಶರಣಾಗತರಾದರೇ ಮುಖ್ಯವಾಹಿನಿಗೆ ತರಲು ಬದ್ಧವಾಗಿದೆ. ನಕ್ಸಲರು ಶರಣಾಗತಿಯ ನೀತಿಯನ್ನು ಸರಳೀಕರಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ ಎಂದು ಹೇಳಿದ್ದಾರೆ.

ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

BIG NEWS: ನನ್ನ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ ಅಭಿಮಾನ ಜವಾಬ್ದಾರಿಯುತವಾಗಿರಲಿ: ನಟ ಯಶ್ | Actor Yash

ಬೆಂಗಳೂರು ಜನತೆ ಗಮನಕ್ಕೆ: ನಾಳೆ ರಾತ್ರಿ 8ರಿಂದ ಈ ಮಾರ್ಗದಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ | Bengaluru Traffic Updare

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM1 Min Read

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read
Recent News

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM

ಗುಜರಾತ್ ಸಿಎಂಯಿಂದ ಭಾರತದ ಪ್ರಧಾನಿವರೆಗೆ, 24 ವರ್ಷಗಳ ನಿರಂತರ ಸೇವೆ : ಮೋದಿಯ ‘ಅಚಲ ಸಮರ್ಪಣೆ’ಯ ಸ್ಟೋರಿಯಿದು!

22/03/2026 9:33 PM
State News
KARNATAKA

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

By kannadanewsnow0922/03/2026 9:33 PM KARNATAKA 1 Min Read

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಸಂಚಲನ…

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.