ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ಇಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದರು.
ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಸೂಚಿಸಿದ್ದಾರೆ.
ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ , ಅಹವಾಲು ಪರಿಗರಿಸಿ ಎಂದು DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್ ಸೂಚನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದ್ದಾರೆ.
ಅಂದಹಾಗೇ ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾದಂತ ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.
ಇಂದಿನ ಸಿಎಂ ಸಿದ್ಧರಾಮಯ್ಯ ‘ಜನಸ್ಪಂದನ’ಕ್ಕೆ ಭರ್ಜರಿ ರೆಸ್ಪಾನ್ಸ್: 10,000 ಅರ್ಜಿ ಸ್ವೀಕೃತ, 20 ಸಾವಿರ ಮಂದಿ ಭಾಗಿ
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’