ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿರೋದಾಗಿ ಹೇಳಲಾಗುತ್ತಿದೆ.
2023ರಿಂದ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನ ಬಳಕೆ ಮಾಡಿದ್ದಾರೆ. ಇದಕ್ಕಾಗಿ 47,38,24,347 ಕೋಟಿ ರೂಪಾಯಿ ಖರ್ಚು ಮಾಡಿರೋದಾಗಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
2023ರಿಂದ 2025ರ ನವೆಂಬರ್ ವರೆಗಿನ ವಿಮಾನ ಪ್ರಯಾಣದ ವೆಚ್ಚ ಈ ಮೇಲಿನದ್ದು ಆಗಿದೆ. ಈ ಹಿಂದೆ ಕಾವೇರಿ ನಿವಾಸ ನವೀಕರಣದಿಂದ ಸುದ್ದಿಯಾಗಿದ್ದಂತ ಸಿಎಂ ಸಿದ್ಧರಾಮಯ್ಯ, ಕೋಟಿ ಕೋಟಿ ಅನುದಾನ ವೆಚ್ಚ ಮಾಡಿದ್ದು ವರದಿಯಾಗಿತ್ತು.
ಇದೀಗ ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್.ರವಿಕುಮಾರ್ ಕೇಳಿದಂತ ಚುಕ್ಕೆ ರಹಿತ ಪ್ರಶ್ನೆಗೆ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಮಾನ ವೆಚ್ಚದ ಬಗ್ಗೆ ಸರ್ಕಾರ ಉತ್ತರ ನೀಡಲಾಗಿದೆ. ವಿಮಾನಯಾನಕ್ಕೆ ಸಿದ್ಧರಾಮಯ್ಯ 47 ಕೋಟಿಗೂ ಹೆಚ್ಚು ವೆಚ್ಚ ಮಾಡಿದ್ದಾರೆ. ಇದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹೋಗಲು ಹೆಲಿಕಾಪ್ಟರ್, ವಿಮಾನ ಬಳಕೆ ಮಾಡಿರುವುದು ಸೇರಿದೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗಳನ್ನು ಪರಿಶೀಲಿಸುವ ಸಮಿತಿಯ ಅವಧಿಯನ್ನು ವಿಸ್ತರಿಸಿದ ಲೋಕಸಭೆ
ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!








