ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸಿದ್ದರು. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಗಳು ಕಾನೂನಿಗೆ ಗೌರವ ನೀಡಿ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟಿದ್ದಾರೆ.ಕಾನೂನಿಗೆ ಗೌರವ ಕೊಟ್ಟು ವಿಚಾರಣೆ ಎದುರಿಸಿದ್ದಾರೆ. ನಾವು ಒಂದು ವಾರ ವಿನಾಯಿತಿ ಕೇಳಬಹುದಿತ್ತು ಆದರೆ ಅಧಿಕಾರದಲ್ಲಿ ಇದ್ದುಕೊಂಡು ಕಾನೂನು ಗೌರವಿಸಿದ್ದಾರೆ ಎಂದು ತಿಳಿಸಿದರು.
ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ವಿಚಾರವಾಗಿ, ಅಧಿಕಾರದಲ್ಲಿ ಇದ್ದಾಗ ಏನು ಬೇಕಾದರೂ ದೂರು ಕೊಡಬಹುದು. ಈ ಹಿಂದೆ ಇದೇ ರೀತಿ ನೂರಾರು ದೂರುಗಳು ಬಂದಿತ್ತು. ಈಗ ಸ್ಪೆಷಲ್ ಆಗಿ ಹೊರಟಿದ್ದಾರೆ. ರಾಜಕೀಯದ ಬಣ್ಣ ಬಳಿಯುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದರು.