ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದಾರೆ.
ಹೌದು ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಲಿದ್ದಾರೆ. ಇಂದು ರಾಜ್ಯದ 28 ಸಂಸದರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಅಲ್ಲದೇ ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವದರಿಂದ ನರೇಂದ್ರ ಮೋದಿಗೆ ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಜೂನ್ 29ರಂದು ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನದ ಬಗ್ಗೆ ಸಿಎಂ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.