ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿ ಹಲವರು ಭಾಗಿಯಾಗಲಿದ್ದಾರೆ.ಸಭೆಗೆ ಹಾಜರಾಗಲು ಕಲ್ಯಾಣ ಕರ್ನಾಟಕ ಭಾಗದ ಸಚಿವರಿಗೂ ಕೂಡ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಒಳಪಡುವಂತಹ ಜಿಲ್ಲೆಗಳ ಅಭಿವೃದ್ಧಿ ಕೋರಿದಂತೆ ಚಲಿಸಲಾಗುತ್ತದೆ ಹಾಗೂ ಅಭಿವೃದ್ಧಿಗಾಗಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದರ ಕುಡಿತಂತೆ ಚರ್ಚಿಸಲಾಗುತ್ತದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.