ಬೆಂಗಳೂರು: ಮುಡಾ ಹಗರಣ ಸಂಬಂಧ ಮೈಸೂರು ಚಲೋ ಪಾದಯಾತ್ರೆಯನ್ನು ಬಿಜೆಪಿ-ಜೆಡಿಎಸ್ ನಡೆಸುತ್ತಿದೆ. ಈ ಬೆನ್ನಲ್ಲೇ ನಾಳೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಾಳಿನ ಸುದ್ದಿಗೋಷ್ಠಿಯಲ್ಲೇ ಮುಡಾ ಹಗರಣದ ಬಗ್ಗೆ ಮತ್ತಷ್ಟು ಮಹತ್ವದ ದಾಖಲೆಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ : 07.08.2024ರ ಬುಧವಾರ ಬೆಳಗ್ಗೆ 10.00 ಗಂಟೆಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ ಅಂತ ತಿಳಿಸಿದೆ.
ನಾಳಿನ ಸಿಎಂ ಸಿದ್ಧರಾಮಯ್ಯ ಅವರ ಸುದ್ದಿಗೋಷ್ಠಿಯಲ್ಲಿ ರಾಜ್ಯ ರಾಜಕೀಯ ವಿದ್ಯಮಾನ, ರಾಜ್ಯಪಾಲರ ನಡೆಯ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಅಲ್ಲದೇ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳನ್ನು ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಚ್ಚಿಡೋ ಸಾಧ್ಯತೆ ಇದೆ. ಆ ಬಗ್ಗೆ ನಾಳೆಯ ವರೆಗೆ ಕಾದು ನೋಡಬೇಕಿದೆ.
BREAKING : ದೇಶದಿಂದ ಪರಾರಿಯಾಗಲು ಯತ್ನಿಸಿದ್ದ ಬಾಂಗ್ಲಾದೇಶದ ಮಾಜಿ ‘ಐಟಿ ಸಚಿವ’ ಅರೆಸ್ಟ್
BREAKING : ಯುಎಸ್ ಉಪಾಧ್ಯಕ್ಷ ಅಭ್ಯರ್ಥಿಯಾಗಿ ‘ಟಿಮ್ ವಾಲ್ಜ್’ ಆಯ್ಕೆ ಮಾಡಿದ ‘ಕಮಲಾ ಹ್ಯಾರಿಸ್’