ಹೊಸಪೇಟೆ: ಮೂರು ದಿನಗಳ ಹಂಪಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯ ಲಿದ್ದು, ವಿಜಯನಗರದ ಗತವೈಭವ ಮರುಕಳಿಸಲು ಹಂಪಿ ಸಜ್ಜುಗೊಳ್ಳುತ್ತಿದೆ. ಸಂಜೆ 7.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಅಶ್ವಿನಿ ಪುನೀತ್ ರಾಜಕುಮಾರ್, ಶಾಸಕ ಗವಿಯಪ್ಪ, ಸಚಿವರಾದ ಜಮೀರ್, ತಂಗಡಗಿ ಸೇರಿ ಗಣ್ಯರು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಹಂಪಿಯ ಗಾಯತ್ರಿ ಪೀಠ ವೇದಿಕೆ, ಬಸವಣ್ಣ ವೇದಿಕೆ, ವಿರೂಪಾಕ್ಷೇಶ್ವರ ವೇದಿಕೆ ಮತ್ತು ಸಾಸಿವೆಕಾಳು ಗಣಪತಿ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಉತ್ಸವದಲ್ಲಿ ಟಗರು, ಎತ್ತು, ಶ್ವಾನಗಳ ಪ್ರದರ್ಶನ, ಪುಸ್ತಕ ಮೇಳ, ವಸ್ತು ಪ್ರದರ್ಶನ, ಸಿರಿಧಾನ್ಯ ಮೇಳ ನಡೆಯಲಿದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮ, ಕುಸ್ತಿ ಪಂದ್ಯಾವಳಿ, ಎತ್ತಿನ ಬಂಡಿಗಳ ಗಾಲಿ ಜೋಡಣೆ ಸೇರಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಗಸದಿಂದ ಹಂಪಿ ಸ್ಮಾರಕಗಳ ವೀಕ್ಷಣೆಗೆ ಹಂಪಿ ಬೈ ಸೈ ಯೋಜನೆ ರೂಪಿಸಲಾಗಿದೆ.