ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿರುವ ಹಾಗೂ ವಿರಾಜಪೇಟೆಯ ಕಾಂಗ್ರೆಸ್ ಶಾಸಕರು ಆಗಿರುವಂತಹ ಮನೆಗೆ ಭೇಟಿ ನೀಡಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಅದರ ಅಂಗವಾಗಿ ಇಂದು ಮೈಸೂರಿನಿಂದ ಹೆಲಿಕ್ಯಾಪ್ಟರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸಿಎಂ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಅವರ ಮನೆಗೆ ಭೇಟಿ ನೀಡಲಿದ್ದು ಕೊಡಗು ಜಿಲ್ಲೆಯ ವಿರಾಜಪೇಟ್ ಕ್ಷೇತ್ರದ ಕೈ ಶಾಸಕರಾಗಿದ್ದರೆ.
ಮಡಿಕೇರಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ಪಿ ಕಛೇರಿ ಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ, ನಂತರ ವಿರಾಜಪೇಟೆ, ಮಡಿಕೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಎನ್ಎಸ್ ಬೋಸರಾಜು ಸಾಥ್ ನೀಡಲಿದ್ದಾರೆ ಅದರಂತೆ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಹಿಂತಿರುಗಲಿದ್ದಾರೆ